ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯದರ್ತ ಪ್ರವೀಣ್ ಹತ್ಯೆ ಖಂಡಿಸಿ ಇಂದು ನಡೆಸುತ್ತಿರುವಂತ ಪ್ರತಿಭಟನೆ ತಾರಕ್ಕೇರಿದೆ. ಹಿಂದೂ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ, ಲಾಠಿಚಾರ್ಜ್ ಕೂಡ ನಡೆಸಲಾಗಿದೆ. ಈ ವೇಳೆ ಹಿಂದೂ ಕಾರ್ಯಕರ್ತನೋರ್ವ ಗಾಯಗೊಂಡಿದ್ದಾನೆ.

ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಸರಕಾರ ಮೈಮರೆತಿದ್ದು ಯಾಕೆ? – ಹೆಚ್.ಡಿ ಕುಮಾರಸ್ವಾಮಿ ಕಿಡಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪರಿಸ್ಥಿತಿ ಮತ್ತಷ್ಟು ಕೆಂಡವಾಗಿದೆ. ಪ್ರವೀಣ್ ಹತ್ಯೆ ಖಂಡಿಸಿ ಇಂದು ನಡೆಸಲಾಗುತ್ತಿದ್ದಂತ ಪ್ರತಿಭಟನೆಯು ವ್ಯಾಪಕ ಸ್ವರೂಪವನ್ನು ಪಡೆದುಕೊಂಡಿದೆ.

RSSನವರ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಹೇಳಿಲ್ಲ: ವೈರಲ್ ಪೋಸ್ಟ್ ನಿಲ್ಲಿಸದಿದ್ರೇ ಕಾನೂನು ಕ್ರಮ – ಸಿದ್ಧರಾಮಯ್ಯ ಎಚ್ಚರಿಕೆ

ಪೊಲೀಸರು ಹಾಗೂ ಪ್ರತಿಭಟನಾ ನಿರತರ ನಡುವೆ ಕೆಲವೆಡೆ ವಾಗ್ವಾದ ನಡೆದ್ರೇ.. ಮತ್ತೆ ಕೆಲವು ಕಡೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಹಿಂದೂ ಕಾರ್ಯಕರ್ತರು ಪ್ರತಿಭಟನೆ ವೇಳೆ ಕಲ್ಲು ತೂರಿದ ಪರಿಣಾಮ, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

BIGG NEWS : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಸಿಹಿಸುದ್ದಿ : `ಶುಭ ಲಗ್ನ’ ಸಾಮೂಹಿಕ ವಿವಾಹ ಯೋಜನೆಗೆ ಚಿಂತನೆ!

ಪೊಲೀಸರು ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಪ್ರತಿಭಟನಾ ನಿರತ ಕಾರ್ಯಕರ್ತರು ಸ್ಥಳದಿಂದ ಕಾಲ್ ಕಿತ್ತಿದ್ದಾರೆ. ಇನ್ನೂ ಪೊಲೀಸರು ಮನಬಂಧಂತೆ ಲಾಠಿ ಬೀಸಿದ ಪರಿಣಾಮ, ಹಿಂದೂ ಕಾರ್ಯಕರ್ತನೊಬ್ಬ ತಲೆ ಹೊಡೆದು ಗಾಯವಾಗಿದೆ. ಆತನನ್ನು ಸ್ಥಳೀಯರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

Share.
Exit mobile version