ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಶ್ರೀ ಮುತ್ತತ್ತಿ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಬೆಳಕವಾಡಿ ಪೋಲೀಸರು ದಾಳಿ ಮಾಡಿ 24 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಶನಿವಾರ ರಾತ್ರಿ ಮುತ್ತತ್ತಿಯಲ್ಲಿ ಹಲವಾರು ಮಂದಿ ಲಕ್ಷಾಂತರ ರೂಪಾಯಿಯೊಂದಿಗೆ ಜೂಜಾಟದಲ್ಲಿ ತೊಡಗಿದ್ದಾರೆ. ಎಂದು ಖಚಿತ ಮಾಹಿತಿ ಮೇರೆಗೆ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ ಹಾಗೂ ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್. ಶ್ರೀಧರ್ ರವರ ಸೂಚನೆ ಮೇರೆಗೆ ದಾಳಿ ನಡೆಸಿದ ಬೆಳಕವಾಡಿ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಿ.ವಿ.ಪ್ರಕಾಶ್ ಹಾಗೂ ಸಿಬ್ಬಂದಿಗಳು ಭಾನುವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ದಾಳಿ ಮಾಡಿ ಸುಮಾರು 4 ಲಕ್ಷದ 38 ಸಾವಿರದ 770 ರೂ ನಗದು ಹಾಗೂ 13 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಹಲಗೂರು ಪೋಲೀಸ್ ಠಾಣೆಯಲ್ಲಿ 24 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ
Watch Video: ಇಂಗ್ಲೀಷ್ ಮೇಷ್ಟ್ರಾದ ಸಚಿವ ಡಾ.ಶರಣಪ್ರಕಾಶ ಪಾಟೀಲ: ವೀಡಿಯೋ ವೈರಲ್
BIG NEWS: ‘ಸಿಗಂದೂರು ಸೇತುವೆ’ಗಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಯಡಿಯೂರಪ್ಪಗೆ ಬರೆದಿದ್ದ ಪತ್ರ ವೈರಲ್