Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING :  ಟ್ರೈನಿ ‘IAS’ ಅಧಿಕಾರಿ ಪೂಜಾ ಖೇಡ್ಕರ್‌ಗೆ ‘ಸುಪ್ರೀಂಕೋರ್ಟ್’ ನಿಂದ ಜಾಮೀನು ಮಂಜೂರು | Pooja Khedkar

21/05/2025 1:40 PM

BREAKING : ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ CM ಸಿದ್ದರಾಮಯ್ಯ

21/05/2025 1:34 PM

BIG NEWS : ಬುಲೆಟ್ ರೈಲು ಯೋಜನೆಯಲ್ಲಿ ದೊಡ್ಡ ಯಶಸ್ಸು : 300 ಕಿ.ಮೀ ವಯಾಡಕ್ಟ್ ಕೆಲಸ ಪೂರ್ಣಗೊಂಡ ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್ | WATCH VIDEO

21/05/2025 1:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಕಡ್ಡಾಯ: ರಾಜ್ಯ ಸರ್ಕಾರ ಸೂಚನೆ
KARNATAKA

ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಕಡ್ಡಾಯ: ರಾಜ್ಯ ಸರ್ಕಾರ ಸೂಚನೆ

By kannadanewsnow0704/01/2024 2:07 PM
vidhana soudha
vidhana soudha

ಬೆಂಗಳೂರು: ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಕಡ್ಡಾಯ ಮಾಡಿದ್ದು, ಈ ಬಗ್ಗೆ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ. ಸುತ್ತೊಲೆಯಲ್ಲಿ ಈ ಕೆಳಕಂಡತೆ ಉಲ್ಲೇಖ ಮಾಡಲಾಗಿದೆ. 

ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್‌ ಮಾಡಿಸುವ ಬಗ್ಗೆ ಕ್ರಮವಹಿಸಲು ತಿಳಿಸಲಾಗಿರುತ್ತದೆ. ಕರ್ನಾಟಕ ಮೊಟಾರು ವಾಹನಗಳ ನಿಯಮಗಳು 1989ಕ್ಕೆ ತಿದ್ದುಪಡಿ ತಂದು Conditions for vehicles engaged in transport of school children Rules 2012, ಖಾಸಗಿ ಒಪ್ಪಂದ ವಾಹನಗಳಲ್ಲಿ ಶಾಲಾ ಮಕ್ಕಳಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಲುವಾಗಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ (4) ರಲ್ಲಿ ಈ ಕೆಳಕಂಡಂತೆ ವ್ಯಾಖ್ಯಾನಿಸಲಾಗಿದೆ.

4. School cabs Safety Committee:- In every school wherein school cab used as a means of transportation shall have a safety committee to look into the matters pertaining to safe transportation of School children, and transportation fee and identification of stops. The safety Committee should comprise parents and transporters representatives along with the school staff. The committee shall verify the validity of documents of the vehicle viz., Registration certificate, Certificate of fitness, Certificate of Insurance Permit, Emission Certificate, Driving License, Fire extinguisher, First aid kit, and ensure that all the safety measures have been adopted in the vehicle.

ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ನಿಯಮದಂತೆ ‘ಸ್ಕೂಲ್ ಕ್ಯಾಬ್ ಸೇಫ್ಟಿ ಕಮಿಟಿ” ರಚಿಸಲು ಉಲ್ಲೇಖ-2ರನ್ವಯ ಈ ಕಛೇರಿಯಿಂದ ಸುತ್ತೋಲೆಯನ್ನು ಹೊರಡಿಸಿರುವುದನ್ನು ಉಲ್ಲೇಖಿಸಿ ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಮತ್ತು ವಾಹನಗಳ ಸಹಾಯಕರ ಪೊಲೀಸ್ ವೆರಿಫಿಕೇಷನ್‌ ಮಾಡಿಸುವ ಬಗ್ಗೆ ಎಲ್ಲಾ ಶಾಲಾ ಆಡಳಿತ ಮಂಡಳಿಗಳು ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ.

1. ಶಾಲಾ ವಾಹನಗಳಲ್ಲಿ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಸಂದರ್ಭದಲ್ಲಿ ಖಾಸಗಿ ಶಾಲಾ ವಾಹನಗಳಲ್ಲಿ ಚಾಲಕರಿಂದ ಮತ್ತು ವಾಹನಗಳ ಸಹಾಯಕರಿಂದ ಮಕ್ಕಳ ಮೇಲೆ ದೌರ್ಜನ್ಯ ಎಸಗುತ್ತಿರುವಂತೆ ಪ್ರಕರಣಗಳು ವರದಿಯಾಗುತ್ತಿರುವುದು ಕಂಡುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಬಸ್, ವ್ಯಾನ್, ಆಟೋ ರಿಕ್ಷಾ ಮತ್ತು ಇತರೆ ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ಎಲ್ಲಾ ಚಾಲಕರ ಮತ್ತು ಸಹಾಯಕರ ಮಾನಸಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಪೊಲೀಸ್ ಠಾಣೆಗಳಿಂದ ಅವರ ನಡತೆಯ ಬಗ್ಗೆ ನಡವಳಿಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯುವುದು.

2. ಖಾಸಗಿ ಶಾಲಾ ವಾಹನಗಳಲ್ಲಿ, ಬಸ್, ವ್ಯಾನ್, ಆಟೋ ರಿಕ್ಷಾಗಳಲ್ಲಿ ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಕೆಲಸವನು ನಿರ್ವಹಿಸುವ ಚಾಲಕರು ಮತ್ತು ಸಹಾಯಕರ ನಡವಳಿಕೆ ಬಗ್ಗೆ ಸಂಬಂಧಿಸಿದ ಪೊಲೀಸ್‌ ಠಾಣೆಗಳಿಂದ ನಡತೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯುವುದು ಹಾಗೂ ಪ್ರತಿ ಎರಡು  ವರ್ಷಗಳಿಗೊಮ್ಮೆ ನವೀಕರಿಸುವುದು.

3. ಸದರಿ ಚಾಲಕರ ಮತ್ತು ಸಹಾಯಕರಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳಿಂದ ಪಡೆದ ನಡವಳಿಕೆ ಪ್ರಮಾಣ ಪತ್ರವನ್ನು ಆಯಾ ಶಾಲೆಯ SATS ನಲ್ಲಿ ತಂತ್ರಾಂಶದಲ್ಲಿ Upload ಮಾಡುವುದು.

4. ಖಾಸಗಿ ಶಾಲಾ ವಾಹನಗಳಲ್ಲಿ, ಬಸ್, ವ್ಯಾನ್, ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಕೆಲಸವನ್ನು ನಿರ್ವಹಿಸಲು ಸಹಾಯಕರಾಗಿ ಮಹಿಳಾ ಸಹಾಯಕರನ್ನು ನೇಮಿಸಿಕೊಳ್ಳಬೇಕು.

5. ಪ್ರತಿ ಖಾಸಗಿ ಶಾಲಾ ವಾಹನಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಕ್ಯಾಮರ ಅಳವಡಿಸುವುದು. 6. ಶಾಲಾ ವಾಹನಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗದಂತೆ
ನಿರ್ಬಂಧಿಸುವುದು.

7. ಶಾಲಾ ವಾಹನಗಳಲ್ಲಿ ಕೆಲಸ ನಿರ್ವಹಿಸುವ ಚಾಲಕರು ಮತ್ತು ಸಹಾಯಕರು ಪ್ರತಿದಿನ ಕೆಲಸ ಪ್ರಾರಂಭದ ಮೊದಲು ಮತ್ತು ಎಲ್ಲಾ ಮಕ್ಕಳನ್ನು ಮನೆಗೆ ಬಿಟ್ಟನಂತರ ಶಾಲೆಗೆ ಬಂದು ಹಾಜರಾತಿ ಪುಸ್ತಕದಲ್ಲಿ ಶಾಲಾ ಮುಖ್ಯಸ್ಥರ ಸಮ್ಮುಖದಲ್ಲಿ ಕಡ್ಡಾಯವಾಗಿ ಸಹಿ ಮಾಡುವುದು 8. ಸದರಿ ಮಾಹಿತಿಗಳನ್ನು ಪ್ರತಿ ವರ್ಷ ಆಯಾ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಿ ಅನುಮೋದನೆಯನ್ನು ಪಡೆಯುವುದು.

ಈ ಮೇಲ್ಕಂಡ ಅಂಶಗಳನ್ನು ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳು ಕಟ್ಟುನಿಟ್ಟಾಗಿ ಅನುಸರಿಸುತ್ತಿರುವುದನ್ನು ಕ್ಷೇತ್ರಶಿಕ್ಷಣಾಧಿಕಾರಿಗಳು ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳುವುದು. ಶಾಲಾ ಮಕ್ಕಳ ಮೇಲೆ ದೌರ್ಜನ್ಯಗಳಾಗದಂತೆ ತಡೆಗಟ್ಟಲು ಮೇಲ್ಕಂಡ ಅಂಶಗಳನ್ನು ಅನುಸರಿಸಲು ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ ಸೂಚನೆ ನೀಡಲು ತಿಳಿಸಿದೆ. ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿದಲ್ಲಿ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲು ಸೂಕ್ತ ಕ್ರಮ ವಹಿಸುವುವಂತೆ ಸೂಚಿಸಿದೆ.

Police school verification of drivers working in vehicles mandatory: Govt ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ಶಾಲಾ ವೆರಿಫಿಕೇಷನ್ ಕಡ್ಡಾಯ: ಸರ್ಕಾರ ಸೂಚನೆ
Share. Facebook Twitter LinkedIn WhatsApp Email

Related Posts

BREAKING : ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ CM ಸಿದ್ದರಾಮಯ್ಯ

21/05/2025 1:34 PM1 Min Read

SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!

21/05/2025 1:13 PM1 Min Read

BIG NEWS : ‘ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಇಲ್ಲಿದೆ ‘ಆರೋಗ್ಯ ಸಂಜೀವಿನಿ ಆಸ್ಪತ್ರೆ’ಗಳ ಸಂಪೂರ್ಣ ಪಟ್ಟಿ| Arogya Sanjeevini Hospitals

21/05/2025 12:44 PM1 Min Read
Recent News

BREAKING :  ಟ್ರೈನಿ ‘IAS’ ಅಧಿಕಾರಿ ಪೂಜಾ ಖೇಡ್ಕರ್‌ಗೆ ‘ಸುಪ್ರೀಂಕೋರ್ಟ್’ ನಿಂದ ಜಾಮೀನು ಮಂಜೂರು | Pooja Khedkar

21/05/2025 1:40 PM

BREAKING : ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ CM ಸಿದ್ದರಾಮಯ್ಯ

21/05/2025 1:34 PM

BIG NEWS : ಬುಲೆಟ್ ರೈಲು ಯೋಜನೆಯಲ್ಲಿ ದೊಡ್ಡ ಯಶಸ್ಸು : 300 ಕಿ.ಮೀ ವಯಾಡಕ್ಟ್ ಕೆಲಸ ಪೂರ್ಣಗೊಂಡ ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್ | WATCH VIDEO

21/05/2025 1:27 PM

ಜಗತ್ತಿನ ಮುಂದೆ ಪಾಕ್​ನ ಬಂಡವಾಳ ಬಯಲು ಮಾಡಲು ಇಂದಿನಿಂದ ಸಂಸದರ ವಿದೇಶ ಯಾತ್ರೆ ಶುರು

21/05/2025 1:24 PM
State News
KARNATAKA

BREAKING : ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ CM ಸಿದ್ದರಾಮಯ್ಯ

By kannadanewsnow5721/05/2025 1:34 PM KARNATAKA 1 Min Read

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹುತಾತ್ಮ ದಿನದ ಅಂಗವಾಗಿ…

SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!

21/05/2025 1:13 PM

BIG NEWS : ‘ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಇಲ್ಲಿದೆ ‘ಆರೋಗ್ಯ ಸಂಜೀವಿನಿ ಆಸ್ಪತ್ರೆ’ಗಳ ಸಂಪೂರ್ಣ ಪಟ್ಟಿ| Arogya Sanjeevini Hospitals

21/05/2025 12:44 PM

ಸಹಕಾರಿ ಕೃಷಿ ಸಂಘಗಳು ರೈತರಂತೆಯೇ ವಿದ್ಯುತ್ ಸಬ್ಸಿಡಿಗೆ ಅರ್ಹವಾಗಿವೆ: ಕರ್ನಾಟಕ ಹೈಕೋರ್ಟ್

21/05/2025 12:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.