ಬೆಳಗಾವಿ : ನಿನ್ನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ನನ್ನನ್ನು ಮುಟ್ಟಿದರೆ ಕರ್ನಾಟಕದ ಜನ ಸುಮ್ನೆ ಬಿಡಲ್ಲ ಎಂದು ವಿಪಕ್ಷಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಈ ಹೇಳಿಕೆ ವಿಚಾರವಾಗಿ ಕೇಂದ್ರ ಸಚಿವ ವಿ ಸೋಮಣ್ಣ ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಅವರನ್ನು ಯಾರಾದರೂ ಮುಟ್ಟೋಕೆ ಆಗುತ್ತಾ? ಅವರನ್ನು ಮುಟ್ಟಿದರೆ ಪೊಲೀಸರು ಕೇಸ್ ಹಾಕುತ್ತಾರೆ ಎಂದು ವ್ಯಂಗ್ಯವಾಡಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮುಟ್ಟಿದರೆ ಜನ ಸುಮ್ಮನೆ ಇರಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಯಾರಾದರೂ ಅವರನ್ನು ಮುಟ್ಟಿದರೆ ಪೊಲೀಸರು ಕೇಸ್ ಹಾಕುತ್ತಾರೆ ಸಿಎಂ ಅವರನ್ನು ಯಾರಾದರೂ ಮುಟ್ಟೋಕೆ ಆಗುತ್ತಾ? ಯಾರಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟಿದರೆ ಪೊಲೀಸರು ಕೆಎಸ್ ಹಾಕುತ್ತಾರೆ ಎಂದರು.
ಹಾಗಾಗಿ ಸಿಎಂ ಸಿದ್ದರಾಮಯ್ಯ ಆ ಅರ್ಥದಲ್ಲಿ ಮಾತನಾಡಿರಬಹುದು. ಸಿದ್ದರಾಮಯ್ಯ ಅವರು ಅನುಭವಿ ರಾಜಕಾರಣಿ. ಅವರು ಏನು ಮಾತನಾಡುತ್ತಾರೆ ಎನ್ನುವುದು ಅವರಿಗೆ ಬಿಡುತ್ತೇನೆ. ಜನರ ಭಾವನೆಗೆ ತದ್ವಿರುದ್ಧವಾಗಿ ಮಾತಾಡೋದು ಎಷ್ಟು ಸಮಂಜಸ? ರಾಜ್ಯ ಸರ್ಕಾರದ ಕಾರ್ಯ ವೈಖರಿ ಸರಿಯಿಲ್ಲ. ಈ ಮಟ್ಟದಲ್ಲಿ ಎಂದಾದರೂ ನಡೆದಿತ್ತಾ? ನಿಮ್ಮನ್ನು ಯಾರೂ ಮುಟ್ಟುವುದು ಬೇಡ ರಾಜ್ಯ ಸರ್ಕಾರದ ಕಾರ್ಯವೈಕರಿ ಬಗ್ಗೆ ಸಿಎಂ ಗಮನಹರಿಸಬೇಕು ಎಂದು ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಈ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.