ನವದೆಹಲಿ: ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ವಿಚಕ್ಷಣಾ ಆಯೋಗದ ಜಾಗೃತ ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಭ್ರಷ್ಟರಿಗೆ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಅವಕಾಶ ನೀಡಬಾರದು ಮತ್ತು ಅವರಿಗೆ ರಾಜಕೀಯ ಮತ್ತು ಸಾಮಾಜಿಕ ರಕ್ಷಣೆ ನೀಡಬಾರದು” ಎಂದು ಹೇಳಿದರು.
“ಭ್ರಷ್ಟಾಚಾರವು ಒಂದು ದುಷ್ಟತನವಾಗಿದೆ ಮತ್ತು ನಾವು ಅದರಿಂದ ದೂರವಿರಬೇಕು” ಎಂದು ಪ್ರಧಾನಿ ಹೇಳಿದರು. ಕಳೆದ 8 ವರ್ಷಗಳಲ್ಲಿ ನಾವು ‘ಅಭಾವ್’ (ಕೊರತೆ) ಮತ್ತು ‘ದಬಾವ್’ (ಒತ್ತಡ) ಮಾಡಿದ ವ್ಯವಸ್ಥೆಯನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದೇವೆ ಅಂತ ತಿಳಿಸಿದರು.
ಕೇಂದ್ರೀಯ ವಿಚಕ್ಷಣಾ ಆಯೋಗದ (ಸಿವಿಸಿ) ಹೊಸ ದೂರು ನಿರ್ವಹಣಾ ವ್ಯವಸ್ಥೆಯ ಪೋರ್ಟಲ್ ಅನ್ನು ಉದ್ಘಾಟಿಸಿದ ಪ್ರಧಾನಿ ಮೋದಿ, “ಅಭಿವೃದ್ಧಿ ಹೊಂದಿದ ಭಾರತದ ಆಡಳಿತಾತ್ಮಕ ಪರಿಸರ ವ್ಯವಸ್ಥೆಯಲ್ಲಿ ಭ್ರಷ್ಟಾಚಾರಕ್ಕೆ ದೇಶವು ಶೂನ್ಯ ಸಹಿಷ್ಣುತೆಯನ್ನು ಹೊಂದಿರಬೇಕು” ಎಂದು ಹೇಳಿದರು.