ಮಾಜಿ ಸಚಿವ ಆಂಜನೇಯ ಮಾಡಿದ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ : ಸಚಿವ ಪ್ರಭು ಚವ್ಹಾಣ್ ತಿರುಗೇಟು – Kannada News Now


State

ಮಾಜಿ ಸಚಿವ ಆಂಜನೇಯ ಮಾಡಿದ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ : ಸಚಿವ ಪ್ರಭು ಚವ್ಹಾಣ್ ತಿರುಗೇಟು

ಬೆಂಗಳೂರು : ನಾನು ಸುಳ್ಳು, ಮೋಸದಿಂದ ಜಾತಿ, ಜನ್ಮ ಪ್ರಮಾಣ ಪತ್ರ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವ ಎಂದು ಪಶು ಸಂಗೋಪನೆ, ವಕ್ ಮತ್ತು ಹಜ್ ಖಾತೆ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂಬ ಮಾಜಿ ಸಚಿವ ಹೆಚ್. ಆಂಜನೇಯ ಆರೋಪಕ್ಕೆ ತಿರುಗೇಟು ನೀಡಿದ ಚವ್ಹಾಣ್, ನಾನು ಸುಳ್ಳು, ಮೋಸದಿಂದ ಜಾತಿ, ಜನ್ಮ ಪ್ರಮಾಣ ಪತ್ರ ಪಡೆದಿರುವುದು ಸಾಬೀತಾದರೆ ಅದೇ ಕ್ಷಣ ರಾಜಕೀಯದಿಂದ ನಿವೃತ್ತಿ ಪಡೆಯುವೆ, ಒಂದು ವೇಳೆ ಸುಳ್ಳು ಎಂದಾದರೆ ಬಹಿರಂಗವಾಗಿ ಕ್ಷಮೆ ಕೋರಲಿ ಎಂದು ಸವಾಲು ಹಾಕಿದ್ದಾರೆ.

ನಾನು ಮೂಲತಃ ಕರ್ನಾಟಕದವನು. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೋಂತಿ ತಾಂಡಾ ನನ್ನ ಹುಟ್ಟೂರು, ನಾನು ಪರಿಶಿಷ್ಟ ಜಾತಿ ಲಂಬಾಣಿ ಜನಾಂಗಕ್ಕೆ ಸೇರಿದ್ದೇನೆ. ಆಂಜನೇಯ ಅವರು ಸುಳ್ಳು ಮಾಹಿತಿ ಪಡೆದು ನನ್ನ ವಿರುದ್ಧ ಆರೋಪ ಮಾಡಿದ್ದಾರೆ ಎಂದರು.
error: Content is protected !!