Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`ನನ್ನನ್ನು ಮೌನಗೊಳಿಸಬಹುದು, ಆದರೆ ಸೋಲಿಸಲು ಸಾಧ್ಯವಿಲ್ಲ’ : ಆಮ್ ಆದ್ಮಿ ಪಕ್ಷದ ವಿರುದ್ಧ ರಾಘವ್ ಚಡ್ಡಾ ಆಕ್ರೋಶ | WATCH VIDEO

03/04/2026 11:14 AM

BREAKING : ಫಾರ್ಮಾ ಕಂಪನಿಗಳಿಗೆ ಟ್ರಂಪ್ ಶಾಕ್: ಬ್ರಾಂಡೆಡ್ ಔಷಧಗಳ ಮೇಲೆ ಶೇ. 100ರಷ್ಟು ಸುಂಕ ಹೇರಿಕೆ!

03/04/2026 11:06 AM

ALERT : ಬಿಸಿ ನೀರಿಗಾಗಿ `ಹೀಟಿಂಗ್ ರಾಡ್’ ಬಳಸುವವರೇ ಎಚ್ಚರ : ಕರೆಂಟ್ ಶಾಕ್ ನಿಂದ ಮಹಿಳೆ ಸಾವು.!

03/04/2026 11:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಧ್ಯಮಗಳ ಮುಂದಿನ ಚರ್ಚೆಯಿಂದ ರಾಜಕೀಯ ನಡೆಯುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್
KARNATAKA

ಮಾಧ್ಯಮಗಳ ಮುಂದಿನ ಚರ್ಚೆಯಿಂದ ರಾಜಕೀಯ ನಡೆಯುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

By kannadanewsnow0929/11/2024 2:34 PM

ದೆಹಲಿ : “ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, “ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ” ಎಂದು ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಅವರು ಸಮಾವೇಶದ ಬಗ್ಗೆ ತಿಳಿಸಿದ್ದಾರೆ

ಕಾಂಗ್ರೆಸ್ ಪಕ್ಷದ ಸಾಧನ ಸಮಾವೇಶವು ಸಿದ್ದರಾಮಯ್ಯ ಅವರ ಸಮಾವೇಶವಾಗಿ ಬದಲಾಗಿದೆ ಎನ್ನುವ ಕುರಿತು ಅಸಮಾಧಾನ ಹೊಂದಿರುವ ಪತ್ರವು ಎಐಸಿಸಿಗೆ ಬಂದಿದೆ ಎನ್ನುವ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿ ಮಾಡಿ ಮೂರು ನಾಲ್ಕು ದಿನಗಳಾಗಿವೆ. ಪಕ್ಷದ ಭಾಗವಹಿಸುವಿಕೆ ಖಂಡಿತ ಇದ್ದೆ ಇರುತ್ತದೆ” ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಕೇಳಿದಾಗ, “ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮಾ ಗಾಂಧಿಯವರು ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಅವರನ್ನು ಭೇಟಿಯಾಗಿದ್ದೆ.

ಡಿಸೆಂಬರ್ 28 ರಂದೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ. ಆದ ಕಾರಣ ಈ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಬಳಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಿ ತೆಗೆದುಕೊಂಡ ಸಲಹೆ, ಸೂಚನೆಗಳನ್ನು ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಚರ್ಚೆ ಮಾಡಿದೆ. ಸುಮಾರು 300 ಕ್ಕೂ ಹೆಚ್ಚು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ನಾವು ಈ ಕಾರ್ಯಕ್ರಮ ಕರ್ನಾಟಕದಲ್ಲಿ ನಡೆಯಬೇಕು ಎನ್ನುವ ಅಭಿಲಾಷೆಯನ್ನು ಹೊಂದಿದ್ದೇವೆ. ಈ ಬಗ್ಗೆ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಿ ತಿಳಿಸುವುದಾಗಿ ಅವರು ಹೇಳಿದ್ದಾರೆ. ನಾನು ಮತ್ತು ಮುಖ್ಯಮಂತ್ರಿ ಇಬ್ಬರು ಒಟ್ಟಿಗೆ ಈ ಬಗ್ಗೆ ಚರ್ಚೆ ಮಾಡಿದ್ದೇವೆ” ಎಂದರು.

ಸಂಪುಟ ವಿಸ್ತರಣೆ ಸಂದರ್ಭ ಒದಗಿ ಬಂದಿಲ್ಲ

ಸಂಪುಟ ವಿಸ್ತರಣೆಯ ಬಗ್ಗೆ ಕೇಳಿದಾಗ, “ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ” ಎಂದು ತಿಳಿಸಿದರು.

ನೀರಾವರಿ ವಿಚಾರವಾಗಿ ಮನವಿ ಸಲ್ಲಿಸಲು ಪ್ರಧಾನಿಗಳ ಭೇಟಿ

ಪ್ರಧಾನಿ ಮೋದಿ ಅವರ ಭೇಟಿಯ ಬಗ್ಗೆ ಕೇಳಿದಾಗ, “ರಾಜ್ಯದ ವಿಚಾರಗಳು ಹಾಗೂ ಮುಖ್ಯವಾಗಿ ನೀರಾವರಿ ವಿಚಾರವಾಗಿ ಮನವಿಯನ್ನು ಸಲ್ಲಿಸಲು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಾಗುತ್ತಿದೆ. ಗುರುವಾರದಂದು ಕೇಂದ್ರ ಅರಣ್ಯ ಸಚಿವರಾದ ಭೂಪೇಂದರ್ ಯಾದವ್ ಹಾಗೂ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಕಳಸಾ – ಬಂಡೂರಿ ವಿಚಾರವಾಗಿ ಪರಿಸರ ಇಲಾಖೆಯಿಂದ ಬಾಕಿ ಇರುವ ಅನುಮತಿ ಹಾಗೂ ಅಡೆತಡೆಗಳನ್ನು ನಿವಾರಿಸಬೇಕು ಎಂದು ಮನವಿ ಸಲ್ಲಿಸಿದ್ದೆವು. ಇದಕ್ಕೆ ಇಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ವನ್ಯಜೀವಿ ಮಂಡಳಿಗೆ ಪ್ರಧಾನಿ ಅವರೇ ಅಧ್ಯಕ್ಷರಾಗಿರುವ ಕಾರಣಕ್ಕೆ ಅವರಿಗೂ ಮನವಿ ಸಲ್ಲಿಸಲಾಗುವುದು” ಎಂದರು.

“ರಾಂಚಿಯಲ್ಲಿ ನಡೆದ ಹೇಮಂತ್ ಸೋರೆನ್ ಅವರ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಕ್ಷದ ಪರವಾಗಿ ರಾಹುಲ್ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ನಾನು ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು. ಇಂಡಿಯಾ ಒಕ್ಕೂಟದ ನಾಯಕರು ಭಾಗವಸಿ ಹೇಮಂತ್ ಅವರಿಗೆ ಶುಭ ಕೋರಿದೆವು” ಎಂದು ತಿಳಿಸಿದರು.

ಡಿ.2ರಂದು ತುಮಕೂರಿನಲ್ಲಿ ‘ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ’ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ

BIG NEWS : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ತನಿಖೆಯಲ್ಲಿ ಸ್ಪೋಟಕ ಅಂಶ ಬಹಿರಂಗ!

Share. Facebook Twitter LinkedIn WhatsApp Email

Related Posts

ALERT : ಬಿಸಿ ನೀರಿಗಾಗಿ `ಹೀಟಿಂಗ್ ರಾಡ್’ ಬಳಸುವವರೇ ಎಚ್ಚರ : ಕರೆಂಟ್ ಶಾಕ್ ನಿಂದ ಮಹಿಳೆ ಸಾವು.!

03/04/2026 11:05 AM2 Mins Read

BREAKING : ವಾಹನ ಸವಾರರಿಗೆ ಬಿಗ್ ರಿಲೀಫ್ : `HSRP’ ನಂಬರ್‌ ಪ್ಲೇಟ್‌ ಕಡ್ಡಾಯ ಆದೇಶ ವಾಪಸ್‌ ಪಡೆದ ಸರ್ಕಾರ.!

03/04/2026 10:56 AM1 Min Read

BREAKING : ಬೀದರ್ ಎಸ್ಪಿಯಿಂದ ಕಿರುಕುಳ ಆರೋಪ : ಫೇಸ್ಬುಕ್ ಲೈವ್ ನಲ್ಲೆ ಮಾತ್ರೆ ಸೇವಿಸಿ ಯೂಟ್ಯೂಬರ್ ಆತ್ಮಹತ್ಯೆಗೆ ಯತ್ನ!

03/04/2026 10:26 AM1 Min Read
Recent News

`ನನ್ನನ್ನು ಮೌನಗೊಳಿಸಬಹುದು, ಆದರೆ ಸೋಲಿಸಲು ಸಾಧ್ಯವಿಲ್ಲ’ : ಆಮ್ ಆದ್ಮಿ ಪಕ್ಷದ ವಿರುದ್ಧ ರಾಘವ್ ಚಡ್ಡಾ ಆಕ್ರೋಶ | WATCH VIDEO

03/04/2026 11:14 AM

BREAKING : ಫಾರ್ಮಾ ಕಂಪನಿಗಳಿಗೆ ಟ್ರಂಪ್ ಶಾಕ್: ಬ್ರಾಂಡೆಡ್ ಔಷಧಗಳ ಮೇಲೆ ಶೇ. 100ರಷ್ಟು ಸುಂಕ ಹೇರಿಕೆ!

03/04/2026 11:06 AM

ALERT : ಬಿಸಿ ನೀರಿಗಾಗಿ `ಹೀಟಿಂಗ್ ರಾಡ್’ ಬಳಸುವವರೇ ಎಚ್ಚರ : ಕರೆಂಟ್ ಶಾಕ್ ನಿಂದ ಮಹಿಳೆ ಸಾವು.!

03/04/2026 11:05 AM

BREAKING : ವಾಹನ ಸವಾರರಿಗೆ ಬಿಗ್ ರಿಲೀಫ್ : `HSRP’ ನಂಬರ್‌ ಪ್ಲೇಟ್‌ ಕಡ್ಡಾಯ ಆದೇಶ ವಾಪಸ್‌ ಪಡೆದ ಸರ್ಕಾರ.!

03/04/2026 10:56 AM
State News
KARNATAKA

ALERT : ಬಿಸಿ ನೀರಿಗಾಗಿ `ಹೀಟಿಂಗ್ ರಾಡ್’ ಬಳಸುವವರೇ ಎಚ್ಚರ : ಕರೆಂಟ್ ಶಾಕ್ ನಿಂದ ಮಹಿಳೆ ಸಾವು.!

By kannadanewsnow5703/04/2026 11:05 AM KARNATAKA 2 Mins Read

ಧಾರವಾಡ: ಮನೆಯಲ್ಲಿ ನೀರು ಕಾಯಿಸಲು ಬಳಸುವ ಎಲೆಕ್ಟ್ರಿಕ್ ಹೀಟಿಂಗ್ ಸ್ಟಿಕ್ (ಇಮ್ಮರ್ಶನ್ ರಾಡ್) ಮಹಿಳೆಯೊಬ್ಬಳ ಪ್ರಾಣವನ್ನೇ ಬಲಿಪಡೆದ ಘಟನೆ ಜಿಲ್ಲೆಯ…

BREAKING : ವಾಹನ ಸವಾರರಿಗೆ ಬಿಗ್ ರಿಲೀಫ್ : `HSRP’ ನಂಬರ್‌ ಪ್ಲೇಟ್‌ ಕಡ್ಡಾಯ ಆದೇಶ ವಾಪಸ್‌ ಪಡೆದ ಸರ್ಕಾರ.!

03/04/2026 10:56 AM

BREAKING : ಬೀದರ್ ಎಸ್ಪಿಯಿಂದ ಕಿರುಕುಳ ಆರೋಪ : ಫೇಸ್ಬುಕ್ ಲೈವ್ ನಲ್ಲೆ ಮಾತ್ರೆ ಸೇವಿಸಿ ಯೂಟ್ಯೂಬರ್ ಆತ್ಮಹತ್ಯೆಗೆ ಯತ್ನ!

03/04/2026 10:26 AM

ಚಾಮರಾಜನಗರ : ಹಬ್ಬಕ್ಕೆಂದು ಊರಿಗೆ ಬಂದಾಗಲೇ ದುರಂತ : ಮದುವೆಗೆ ಒಪ್ಪದಕ್ಕೆ ನೇಣಿಗೆ ಶರಣಾದ ಪ್ರೇಮಿಗಳು!

03/04/2026 10:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.