ಬೆಂಗಳೂರು: ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆಯನ್ನು ( Election ) ಹಾಗೂ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾಗಳಿಗೆ ಉಪಚುನಾವಣೆಯನ್ನು ( Gram Panchayat By Election ) ಘೋಷಣೆ ಮಾಡಲಾಗಿದೆ. ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 30ಕ್ಕೆ ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ.

BREAKING NEWS : ಕಾಬೂಲ್’ನಲ್ಲಿ ಭೀಕರ ‘ಆತ್ಮಾಹುತಿ ಬಾಂಬ್’ ದಾಳಿ ; 46 ಬಾಲಕಿಯರು ಸೇರಿ 53 ಮಂದಿ ದುರ್ಮರಣ |Bomb Blast 

ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದಿಂದ ( Karnataka State Election Commission ) ಅಧಿಸೂಚನೆಯನ್ನು ಹೊರಡಿಸಲಾಗಿದೆ. 2022ರ ಆಗಸ್ಟ್ ನಿಂದ 2022ರ ನವೆಂಬರ್ ವರೆಗೆ ಮುಕ್ತಾಯವಾಗಲಿರುವಂತ 203ರ ಗ್ರಾಮ ಪಂಚಾಯ್ತಿಗಳಿಗೆ ಹಾಗೂ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ 49 ಗ್ರಾಮ ಪಂಚಾಯ್ತಿಗಳಿಗೆ ಉಪ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.

BIGG NEWS : ‘ಅದಾನಿ ಗ್ರೂಪ್ ಷೇರು’ಗಳಲ್ಲಿ ತೀವ್ರ ಕುಸಿತ ; ಶ್ರೀಮಂತರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದ ‘ಗೌತಮ್ ಅದಾನಿ’

ಅಂದಹಾಗೇ ಜಿಲ್ಲಾಧಿಕಾರಿಗಳು ದಿನಾಂಕ 13-10-2022ರಂದು ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ಇನ್ನೂ ದಿನಾಂಕ 18-10-2022ರಿಂದ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನಾಮಪತ್ರಗಳ ಪರಿಶೀಲನೆ ದಿನಾಂಕ 19-10-2022ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ 21-10-2022 ಆಗಿದೆ.

ವಿದ್ಯಾರ್ಥಿಗಳೇ ಗಮನಿಸಿ ; ‘NEET UG Counselling’ ಈ ದಿನದಿಂದ ಆರಂಭ, ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಮಾಹಿತಿ

ದಿನಾಂಕ 28-10-2022ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯಕತೆ ಇದ್ದರೇ ದಿನಾಂಕ 30-10-2022ರಂದು ನಡೆಸಲಾಗುತ್ತದೆ. ಮತಏಣಿಕೆ ದಿನಾಂಕ 31-10-2022ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ತಿಳಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ

Share.
Exit mobile version