ದೆಹಲಿ: ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.
ಎನ್ಡಿಎ ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷಗಳ ಉಮೇದುದಾರರಾಗಿ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಕಣದಲ್ಲಿದಲ್ಲಿದ್ದಾರೆ.
ದೇಶದ ಬಹುತೇಕ ರಾಜ್ಯಗಳಲ್ಲಿ ಎನ್ಡಿಎ ಅಧಿಕಾರದಲ್ಲಿರುವುದು ಹಾಗೂ ಹಲವು ಪ್ರಾದೇಶಿಕ ಪಕ್ಷಗಳು ಬುಡಕಟ್ಟು ಸಮುದಾಯದ ಅಭ್ಯರ್ಥಿ ಎಂಬ ಕಾರಣಕ್ಕೆ ಬೆಂಬಲ ಘೋಷಿಸಿರುವ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ಭಾರಿ ಬಹುಮತದೊಂದಿಗೆ ಆಯ್ಕೆಯಾಗುವುದು ಖಚಿತವಾಗಿದೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 10,86,431 ಲಕ್ಷ ಮತಗಳು ಇದ್ದು, ಈ ಪೈಕಿ ಅರ್ಧಕ್ಕಿಂತ ಹೆಚ್ಚು ಪಡೆದವರು ಆಯ್ಕೆಯಾಗುತ್ತಾರೆ. ಪ್ರಾದೇಶಿಕ ಪಕ್ಷಗಳ ಬೆಂಬಲ ಘೋಷಣೆ ಬಳಿಕ ಎನ್ಡಿಎ ಅಭ್ಯರ್ಥಿ ಬಳಿ ಈಗಾಗಲೇ 6.67 ಲಕ್ಷ ಮತಗಳು ಇವೆ. ಹೀಗಾಗಿ ದ್ರೌಪದಿ ಮುರ್ಮು ಅವರು ಮೂರನೇ ಎರಡರಷ್ಟು ಬಹುಮತದೊಂದಿಗೆ ಆಯ್ಕೆಯಾದೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.
ಒಟ್ಟಾರೆ ದ್ರೌಪದಿ ಗೆದ್ದರೆ ರಾಷ್ಟ್ರಪತಿ ಹುದ್ದೆಗೇರಿದ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿ ಎಂಬ ದಾಖಲೆಗೆ ಪಾತ್ರವಾಗಲಿದ್ದಾರೆ.
ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆಯಲಿದ್ದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Shocking Video: ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್, ಅಬ್ದುಲ್ ಕಲಾಂ ಫೋಟೋ… ನೆಟ್ಟಿಗರಿಂದ ಆಕ್ರೋಶ