ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್.18ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಪರ ವಕೀಲರು ತಮ್ಮ ವಶಕ್ಕೆ ಪ್ರಕರಣ ಸಂಬಂಧ ವಿಚಾರಣೆ ನಡೆಸೋದಕ್ಕೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿದಂತ ನ್ಯಾಯಾಲಯವು ಬಾಡಿ ವಾರೆಂಟ್ ಜಾರಿಗೊಳಿಸಿದೆ.
ಈ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಾಡಿ ವಾರೆಂಟ್ ಪಡೆದು, ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆಯೋದಕ್ಕೆ ತೆರಳುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಪ್ರಜ್ವಲ್ ರೇವಣ್ಣ ಅವರನ್ನು ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಎಸ್ಐಟಿ ತಮ್ಮ ವಶಕ್ಕೆ ಪಡೆಯೋ ಕಾರಣದಿಂದ, ಜೈಲಿನ ಬಳಿಯಲ್ಲಿ ಬಿಗಿ ಪೊಲೀಸ್ ಬಂಧೋಬಸ್ತ್ ಕೈಗೊಳ್ಳಲಾಗಿದೆ.
ನಟ ದರ್ಶನ್ ಪ್ರಕರಣದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
BREAKING: ಒಡಿಶಾದ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕಾರ | Mohan Charan Majhi takes oath