ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಸಮರ್ಥವಾಗಿದ್ದು ಹಾಗಾಗಿ ಈ ಒಂದು ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತುಂಬಾ ಆಳವಾಗಿ ತನಿಖೆ ನಡೆಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆಯುತ್ತಿರುವ ಸಲುವಾಗಿ ಈಗಾಗಲೇ ಎಸ್ಐಟಿ ಅಧಿಕಾರಿಗಳು, ಸಿಬಿಐ ಮುಖಾಂತರ ಬ್ಲ್ಯೂ ಕಾರ್ನರ್ ನೋಟಿಸ್ ಹೊರಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಇರುವುದರಿಂದ ತನಿಖೆ ತ್ವರಿತವಾಗಿ ನಡೆಸುವುದು ಸ್ವಲ್ಪ ಕಷ್ಟವಾಗುತ್ತದೆ ಎಂದರು.
ಪ್ರಕರಣದ ತನಿಖೆಯ ದಾರಿಯನ್ನು ರಾಜ್ಯ ಸರ್ಕಾರ ಹಾದಿ ತಪ್ಪಿಸುತ್ತಿದ್ದು ಇದರಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಸರಿಯಾಗಿ ಪ್ರಕರಣದ ತನಿಖೆ ನಡೆಯುತ್ತಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಪೊಲೀಸರು ಸಮರ್ಥರಿದ್ದಾರೆ ರಾಜಕೀಯ ಹೇಳಿಕೆ ಬಿಟ್ಟು ತನಿಖೆಯು ಸರಿಯಾದ ದಾರಿಯಲ್ಲಿ ಸಾಗುತ್ತಿದೆ ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಒಂದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರಾ? ಎಂದು ಪ್ರಶ್ನಿಸಿದರು.