ದಾವಣಗೆರೆ : ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಸ್ ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಪ್ರಜ್ವಲ್ ರೇವಣ್ಣಗೆ ಫಾರಂ -41 ಎ ಜಾರಿಗೊಳಿಸಿದ್ದು, ನೋಟಿಸ್ ಜಾರಿಗೊಂಡ 24 ಗಂಟೆಯಲ್ಲೇ ತನಿಕೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ನಡುವೆ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಪರವಾಗಿ ಅರುಣ್ ಎಸ್ಐಟಿಗೆ ಮನವಿ ಮಾಡಿಕೊಂಡಿದ್ದು 7 ದಿನಗಳ ಕಾಲ ಕಾಲಾವಕಾಶ ನೀಡಿ ಎಂದು ಪ್ರಜ್ವಲ್ ರೇವಣ್ಣ ಪರ ವಕೀಲ ಜಿ ಅರುಣ್ ಅವರು ಎಸ್ಐಟಿಗೆ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.