ಬೆಂಗಳೂರು: ಅಶ್ಲೀಲ ವೀಡಿಯೋ ಕೇಸ್, ಮಹಿಳೆ ಅಪಹರಣ, ಹಾಸನ ಪೆನ್ ಡ್ರೈವ್ ವೈರಲ್ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅವರು ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿರೋದಾಗಿ ತಿಳಿದು ಬಂದಿದೆ.
ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವಂತ ಅವರು, ಮೂರು ಪ್ರಕರಣಗಳಲ್ಲಿ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ. ವಿದೇಶದಲ್ಲಿ ಇರುವಂತ ಅವರು ತಮ್ಮ ವಕೀಲರ ಮೂಲಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಅಂದಹಾಗೇ ಸಿಐಡಿ ಪೊಲೀಸರು ದಾಖಲಿಸಿಕೊಂಡಿರುವಂತ ಕ್ರೈಂ ನಂ.20/2024, ಸೈಬರ್ ಕ್ರೈಂ ನಂ.2/2024 ಹಾಗೂ ಹೊಳೆನರಸೀಪುರ ಠಾಣೆಯ ಕ್ರೈಂ ನಂ.107/2024 ಮೂರು ಪ್ರಕರಣಗಳಲ್ಲಿ ಜಾಮೀನು ನೀಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.