ಬೆಂಗಳೂರು: ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರು, ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಸಿಐಡಿಯ ಎಸ್ಐಟಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ತಮ್ಮ ವಕೀಲರ ಮೂಲಕ ಪತ್ರವನ್ನು ಕಳುಹಿಸಿರುವಂತ ಅವರು, ಅದರಲ್ಲಿ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರವರ ಮನೆಯ ಮೇಲೆ ತಮ್ಮ ಕಛೇರಿಯಿಂದ ಕಳುಹಿಸಿರುವ ನೋಟಿಸನ್ನು ಅಂಟಿಸಿರುವ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲಂ 41 (ಎ) ಸಿ.ಆರ್.ಪಿ.ಸಿ ದಿನಾಂಕ:30-04-2024ರ ತಮ್ಮ ನೋಟಿಸ್ ನಲ್ಲಿ ತಾವು ದಿನಾಂಕ:01-05-2024 ರಂದು ತಮ್ಮ ಮುಂದೆ ಹಾಜರಾಗಲು ತಿಳಿಸಿರುತ್ತೀರಿ ಎಂದಿದ್ದಾರೆ.
ಆದರೆ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಿದ್ದು, ನನ್ನ ಕಕ್ಷಿದಾರರು ಬೆಂಗಳೂರಿಗೆ ಬಂದು ತಮ್ಮ ಮುಂದ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದು, ನನ್ನ ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರಿದ್ದಾರೆ.
‘ಪ್ರಜ್ವಲ್ ಅಶ್ಲೀಲ ವೀಡಿಯೋ’ ಬಿಡುಗಡೆಗೆ ‘ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ’ಯೇ ಕಾರಣ- ರಮೇಶ್ ಬಾಬು
BIG NEWS: ನಮಗೆ ತೊಂದ್ರೆ ಕೊಟ್ರೆ ‘ಸೂಸೈಡ್’ ಮಾಡಿಕೊಳ್ತೀವಿ: SIT ಮುಂದೆ ಹೇಳಿಕೆಗೆ ‘ಸಂತ್ರಸ್ತೆ’ಯರು ಹಿಂದೇಟು