ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣಗೆ ರೆಡ್ ಕಾರ್ನರ್ ನೋಟಿಸ್ ನೀಡಲು ಎಸ್ ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಕೋರ್ಟ್ ಮೂಲಕ ತನಿಖೆ ಮುಗಿಸಿ ಚಾರ್ಜ್ ಶೀಟ್ ಸಲ್ಲಿಸಲು ಎಸ್ ಐಟಿ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಿದ್ರೆ ಆರೋಪಿ ಬಂಧನ ಸುಲಭವಾಗಲಿದೆ. ತ್ವರಿತಗತಿಯಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ರೆ ಆರೋಪಿ ಬಂಧಿಸಬಹುದು ಎಂದು ಎಸ್ ಐಟಿ ಚಿಂತನೆ ನಡೆಸಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ೧೦ ದಿನದಲ್ಲಿ ತನಿಖೆ ಮುಗಸಿ ಚಾರ್ಜ್ ಶೀಟ್ ಸಲ್ಲಿಕೆಗೆ ಎಸ್ ಐಟಿ ಅಧಿಕಾರಿಗಳು ಸಿದ್ದತೆ ನಡೆಸಿದ್ದು, ಚಾರ್ಜ್ ಶೀಟ್ ಬಳಿಕ ರೆಡ್ ಕಾರ್ನರ್ ನೋಟಿಸ್ ನೀಡಲು ಪ್ಲ್ಯಾನ್ ಮಾಡಿದೆ. ಕೋರ್ಟ್ ಮೂಲಕ ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡಿಸಲು ಚಿಂತನೆ ಮಾಡಿದೆ ಎನ್ನಲಾಗಿದೆ.