ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದು, ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದಾರೆ, ಅವರು ಬರುವವರೆಗೂ ತನಿಖೆಯನ್ನು ತೋರಿತಾ ಗತಿಯಲ್ಲಿ ಮಾಡುವುದು ಕಷ್ಟ ಎಂದು ತಿಳಿಸಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಎಸ್ ಐ ಟಿ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ.ಪ್ರಜ್ವಲ್ ಅವರನ್ನು ಕರೆತರಲು ಎಸ್ಐಟಿ ತಂಡ ಸಿಬಿಐ ನೆರವು ಕೋರಿದೆ. ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವಂತೆ ಎಸ್ಐಟಿ ಸಿಬಿಐಗೆ ಮನವಿ ಮಾಡಿದೆ. ಪ್ರಜ್ವಲ್ ವಾಪಸ್ ಬರೊವರೆಗೂ ತ್ವರಿತಗತಿ ವಿಚಾರಣೆ ಕಷ್ಟ ಎಂದು ತಿಳಿಸಿದರು.

ಇನ್ನು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜಿ ಪರಮೇಶ್ವರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ HD ರೇವಣ್ಣ ಅವರನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತಂತೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ದೂರು ನೀಡಿದವರಿಂದ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತಿದೆ ಎಂದು ತಿಳಿಸಿದರು.

Share.
Exit mobile version