ಬೆಂಗಳೂರು : ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಪ್ರಜ್ವಲ್ ರೇವಣ್ಣ ನವರದ್ದು ಎನ್ನಲಾಗಿರುವ ರಾಸಲೀಲೆ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಮಹಿಳಾ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ವಿಡಿಯೋಗಳು, ಫೋಟೋಗಳನ್ನು ಹರಿಬಿಡುತ್ತಿದ್ದಾರೆ.

ರಾಸಲೀಲೆ ಪೆನ್ ಡ್ರೈವ್ ಪ್ರಕರಣ ಸಂಬಂಧ ಕಿಡಿಗೇಡಿಗಳು ಮಹಿಳಾ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಅಶ್ಲೀಲ ವಿಡಿಯೋ, ಫೋಟೋಗಳನ್ನು ಹರಿಬಿಡುತ್ತಿದ್ದಾರೆ. ಇದರಿಂದ ಕಂಗಾಲಾಗಿರುವ ಮಹಿಳಾ ಅಧಿಕಾರಿಗಳು ಮೂರು ತಿಂಗಳು ರಜೆ ಮೇಲೆ ತೆರಳುತ್ತಿದ್ದಾರೆ. ಇನ್ನೂ ಕೆಲ ಅಧಿಕಾರಿಗಳಿಂದ ವರ್ಗಾವಣೆಗೆ ಮೇಲಾಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ.

ಈ ನಡುವೆ ಜರ್ಮನಿಗೆ ತೆರಳಿರುವ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಬೆಂಗಳೂರಿಗೆ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದಾರೆ. ಮೇ.15 ರ ಮಧ್ಯಾಹ್ನ 1.30 ಕ್ಕೆ ಫ್ರಾಂಕ್ ಫರ್ಟ್ ನಿಂದ ವಿಮಾನವು ಹೊರಡಲಿದ್ದು, ರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್ ಐಟಿಗೆ ನೀಡುವ ಮುನ್ನವೇ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ಹೋಗಿದ್ದು,ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿರುವ ಕಾರಣ ವಿಚಾರಣೆಗೆ ಒಂದು ವಾರಗಳ ಕಾಲ ಸಮಯ ಕೇಳಿದ್ದಾರೆ.

Share.
Exit mobile version