ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಎಸ್ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದು, ತನಿಖೆಗೆ ಸಹಕಾರ ನೀಡುವಂತೆ ಎಸ್ ಐಟಿ ಅಧಿಕಾರಿಗಳು ಮೂವರು ಮಹಿಳಾ ಅಧಿಕಾರಿಗಳಿಗೆ ನೋಟಿಸ್ ನೀಡಿದೆ.
ಎಸ್ ಐಟಿ ಅಧಿಕಾರಿಗಳು ಈಗಾಗಲೇ ಸಿಕ್ಕಿರುವ ಪೆನ್ ಡ್ರೈವ್ ನಲ್ಲಿ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಹಾಗೂ ಅಶ್ಲೀಲ ಫೋಟೋಗಳ ಪರಿಶೀಲನೆ ವೇಳೆ ಮೂವರು ಮಹಿಳಾ ಸರ್ಕಾರಿ ನೌಕರರ ಗುರುತು ಪತ್ತೆಯಾಗಿದೆ. ಈ ಮೂವರು ಸಂತ್ರಸ್ತೆಯರನ್ನು ಎಸ್ ಐಟಿ ಅಧಿಕಾರಿಗಳು ಸಂಪರ್ಕಿಸಿದ್ದು, ದೂರು ನೀಡುವಂತೆ ಸೂಚಿಸಿದ್ದಾರೆ.
ತನಿಖೆಗೆ ಸಹಕಾರ ನೀಡದ ಹಿನ್ನೆಲೆ ಮಹಿಳಾ ಅಧಿಕಾರಿಳಿಗೆ ಎಸ್‌ಐಟಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವೈರಲ್ ಆಗಿರುವ ವಿಡಿಯೋಗಳಲ್ಲಿ ಕೆಲ ಸರ್ಕಾರಿ ಮಹಿಳಾ ಅಧಿಕಾರಿಗಳ ಫೋಟೋಗಳು ಬಹಿರಂಗವಾಗಿರುವ ಹಿನ್ನೆಲೆ ನೋಟಿಸ್ ಕೊಡಲಾಗಿದೆ. ವಿಡಿಯೋ ಮತ್ತು ಫೋಟೋಗಳು ಹಾಸನ ಸೇರಿದಂತೆ ರಾಜ್ಯಾದ್ಯಂತ ವೈರಲ್ ಆಗಿವೆ.