ಬೆಂಗಳೂರು : ಹಲವು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೆ ಎಸ್ ಐಟಿ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ.

ಪ್ರಜ್ವಲ್ ರೆವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳವು ಅವರ ಪತ್ತೆಗೆ ರೆಡ್ ಕಾರ್ನರ್ ನೋಟಿಸ್ ಜಾರಿಗೆ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಪ್ರಜ್ವಲ್ ರೇವಣ್ಣ ಸುಳಿವು ದೊರೆತಿಲ್ಲ. ರೆಡ್ ಕಾರ್ನರ್ ಸಂಬಂಧ ಎಸ್ ಐಟಿ ಅಧಿಕಾರಿಗಳು ಸಿಬಿಐ ಅಧಿಕರಿಗಳ ಜೊತೆಗೆ ಚರ್ಚಿಸಿದ್ದು, ರೆಡ್ ಕಾರ್ನರ್ ನೋಟಿಸ್ ಜಾರಿಯಾದ್ರೆ ಆರೋಪಿ ತಲೆಮರೆಸಿಕೊಂಡಿರುವ ದೇಶದ ಪೊಲೀಸರು, ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಿದ್ದಾರೆ. ನಂತರ ರೆಡ್ ಕಾರ್ನರ್ ಜಾರಿ ಮಾಡಿದ ದೇಶಕ್ಕೆ ಆರೋಪಿಯನ್ನು ಹಸ್ತಾಂತರಿಸಲಿದ್ದಾರೆ.

Share.
Exit mobile version