ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಮಹಿಳಾ ಆಯೋಗವು ಪ್ರಜ್ವಲ್ ರೇವಣ್ಣಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.

ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಹೊರ ದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ. ೭ ರ ಬಳಿಕ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ಬಳಿಕ ಬೆಂಗಳೂರು, ಗೋವಾ, ಮಂಗಳೂರು ಅಥವಾ ಕೊಚ್ಚಿ ಏರ್ ಪೋರ್ಟ್ ಮೂಲಕ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ.

ಪ್ರಜ್ವಲ್ ರೇವಣ್ಣಗೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಇದೀಗ ಮಹಿಳಾ ಆಯೋಗವು ಪ್ರಜ್ವಲ್ ರೇವಣ್ಣಗೆ ನೋಟಿಸ್ ನೀಡಲು ಮುಂದಾಗಿದೆ. ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣಗೆ ಕುಟುಂಬಸ್ಥರು ಒತ್ತಡ ಹೇರುತ್ತಿದ್ದಾರೆ. ವಿಚಾರಣೆಗೆ ಹಾಜರಾಗಿ ಪಕ್ಷಕ್ಕೆ ಆಗುವ ಮುಜುಗರವನ್ನು ತಪ್ಪಿಸಿ ಎಂದು ಒತ್ತಾಯಿಸಲಾಗುತ್ತಿದೆ.

Share.
Exit mobile version