ಚಿತ್ರದುರ್ಗ: ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಪೋಸ್ಕೋ ಕೇಸ್ ನಲ್ಲಿ ಜೈಲು ಸೇರಿದ್ದಾರೆ. ಇಂತಹ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ಆಮಿಷ ಒಡ್ಡಿದ್ದರು ಎಂಬುದಾಗಿ ಒಡನಾಡಿ ಸಂಸ್ಥೆಯ ನಿರ್ದೇಶ ಪರುಶುರಾಮ್ ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಸಂಬಂಧ ತನಿಖಾಧಿಕಾರಿ ಡಿವೈಎಸ್ಪಿ ಲೋಕೇಶ್, ಮುರುಘಾ ಶ್ರೀ ವಿರುದ್ಧ 3 ಕೋಟಿ ಆಮಿಷ ಒಡ್ಡಲಾಗಿತ್ತು ಎಂಬುದಾಗಿ ಹೇಳಿದ್ದಕ್ಕೆ, ಅದರ ಪೂರಕ ಸಾಕ್ಷ್ಯಗಳನ್ನು ನಾಳೆಯೊಳಗೆ ವಿಚಾರಣೆಗೆ ಹಾಜರಾಗಿ, ನೀಡುವಂತೆ ನೋಟಿಸ್ ನಲ್ಲಿ ತಿಳಿಸಿದ್ದಾರೆ.
BIG BREAKING NEWS: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಬೈಕ್ ಸವಾರರು ಸಾವು | BBMP Garbage Truck
ಮತ್ತೊಂದೆಡೆ ಇಂದು ಮುರುಘಾ ಶ್ರೀಗಳು ಪೋಸ್ಕೋ 2ನೇ ಕೇಸ್ ನಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಡಿಸೆಂಬರ್ 1ಕ್ಕೆ ಚಿತ್ರದುರ್ಗ 2ನೇ ಹೆಚ್ಚುವರಿ ನ್ಯಾಯಾಲಯವು ಮುಂದೂಡಿದೆ. ಅಲ್ಲದೇ ಅವರ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 12ರವರೆಗೆ ವಿಸ್ತರಿಸಿದೆ.
BIG NEWS: ‘ವಾಂಟೆಂಡ್ ಕ್ರಿಮಿನಲ್’ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್: ‘BJP ಕಚೇರಿ’ ಈಗ ರೌಡಿಗಳ ಅಡ್ಡೆ – ಕಾಂಗ್ರೆಸ್