ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಚುನಾವಣೆ ನಡೆಯಲಿದ್ದು, ಮತದಾನ ದಿನದಂದು ಕರ್ತವ್ಯಕ್ಕೆ ನೇಮಕವಾದ ಅಧಿಕಾರಿ, ಸಿಬ್ಬಂದಿಗಳು ಇಂದಿನಿಂದ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ ಮತ್ತು ಮತದಾನ ದಿನ ಕರ್ತವ್ಯಕ್ಕೆ ನಿಯೋಜಿತರಾವರಿಗೆ ಮತದಾನಕ್ಕೆ ಸೌಲಭ್ಯ ಕಲ್ಪಿಸಲಾಗಿದೆ.ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಮೇ. ೧ ರಿಂದ ಮೂರು ದಿನಗಳ ಕಾಲ ಅಂಚೆ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿದೆ.
ರಾಜ್ಯದ ಈ ಕ್ಷೇತ್ರಗಳಲ್ಲಿ ಮತದಾನ
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ.