Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ದೂರಿನಲ್ಲಿಯೇ ಸ್ನಾತಕೋತ್ತರ ಸಂಶೋಧನಾ ಕೇಂದ್ರ ಪ್ರಾರಂಭ: ಶಾಸಕ ಕೆ.ಎಂ.ಉದಯ್
KARNATAKA

ಮದ್ದೂರಿನಲ್ಲಿಯೇ ಸ್ನಾತಕೋತ್ತರ ಸಂಶೋಧನಾ ಕೇಂದ್ರ ಪ್ರಾರಂಭ: ಶಾಸಕ ಕೆ.ಎಂ.ಉದಯ್

By ವಸಂತ ಬಿ ಈಶ್ವರಗೆರೆ

ಮಂಡ್ಯ : ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಹೆಚ್ಚಿನ ವಿದ್ಯಾಭ್ಯಾಸ ಕಲ್ಪಿಸಬೇಕೆಂಬ ಉದ್ದೇಶದಿಂದ ಮದ್ದೂರು ನಗರದಲ್ಲಿಯೇ ಸ್ನಾತಕೋತ್ತರ ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು.

ಮದ್ದೂರು ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಪದವಿ ಪ್ರಧಾನ ಸಮಾರಂಭ ಮತ್ತು ‌ಸಂಶೋಧನಾ ಕೇಂದ್ರ ಹಾಗೂ ಪಿಎಂ – ಉಷಾ ಯೋಜನೆಯಡಿ ಕಂಪ್ಯೂಟರ್ ಪ್ರಯೋಗಾಲಯಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಸ್ನಾತಕೋತ್ತರ ಪದವಿ ಪಡೆದ ಬಳಿಕ ಸ್ನಾತಕೋತ್ತರ ಸಂಶೋಧನಾ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಈ ಹಿಂದೆ ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಕ್ಷೇತ್ರದ ವಿದ್ಯಾರ್ಥಿಗಳು ಸ್ಥಳೀಯವಾಗಿಯೇ ಉನ್ನತ ವ್ಯಾಸಂಗ ಮಾಡಬೇಕೆಂಬ ಉದ್ದೇಶದಿಂದ ಸ್ನಾತಕೋತ್ತರ ಪದವಿ ಶಿಕ್ಷಣ ಹಾಗೂ ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗಿದ್ದು, ಹೀಗಾಗಿ ಕಾಲೇಜಿನಲ್ಲಿ ಈ ಬಾರಿ ಶೇ.100 ರಷ್ಟು ಫಲಿತಾಂಶ ಬಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಇತ್ತಿಚಿನ ಸ್ಪರ್ಧಾತ್ಮಕ ಯುಗದಲ್ಲಿ ಪದವಿ ಶಿಕ್ಷಣ ಜೊತೆಗೆ ಕಂಪ್ಯೂಟರ್ ಶಿಕ್ಷಣವನ್ನು ಕಲಿಯಬೇಕಾದ ಅನಿವಾರ್ಯತೆ ಎದುರಾಗಿದೆ. ಯಾವುದೇ ಪದವಿ, ಹುದ್ದೆ, ಸ್ಥಾನಮಾನವನ್ನು ಪಡೆಯಬಹುದು ಆದರೆ, ವಿದ್ಯಾರ್ಥಿ ಜೀವನಕ್ಕೆ ಮತ್ತೆ ಮರಳಲು ಸಾಧ್ಯವಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯುವ ಮೂಲಕ ಉನ್ನತ ಸ್ಥಾನಕ್ಕೆ ಏರಬೇಕೆಂದು ಕಿವಿ ಮಾತು ಹೇಳಿದರು.

ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ಈಗಾಗಲೇ 8 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಕಾಲೇಜಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ವಿದ್ಯಾರ್ಥಿನಿಯರು ಒಪ್ಪಿಗೆ ಸೂಚಿಸಿದರೆ ಮುಂದಿನ ದಿನಗಳಲ್ಲಿ ಕೋ-ಎಡ್ ಎಜುಕೇಷನ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಉದಯ್ ಭರವಸೆ ನೀಡಿದರು.

ಇದೇ ವೇಳೆ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

ಮಂಡ್ಯ ವಿಶ್ವ ವಿದ್ಯಾಲಯದ ಕುಲಪತಿ ಪ್ರೋ.ಕೆ.ಶಿವಚಿತ್ತಪ್ಪ, ಪ್ರಾಂಶುಪಾಲ ಪ್ರೋ.ಕೆ.ಬಿ.ನಾರಾಯಣ್, ಸ್ನಾತಕೋತ್ತರ ವಿಭಾಗಗಳ ಸಂಯೋಜಕ ಡಾ.ಕೆ.ಸಿದ್ದರಾಜು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಂ.ಬಿ.ಮಹಾಲಿಂಗಯ್ಯ, ಸದಸ್ಯರಾದ ಜಯಂತಿ ಲಾಲ್ ಪಟೇಲ್, ಬಿಂದು ಶ್ರೀ, ದಾಸೇಗೌಡ ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಸಾಗರದ ಗಣಪತಿ ಅರ್ಬನ್ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷೆಯಾಗಿ ಸರಸ್ವತಿ ನಾಗರಾಜ್ ಆಯ್ಕೆ

GOOD NEWS: ರಾಜ್ಯದಲ್ಲಿ ಖಾಲಿ ಇರುವ 8,000 ಕಾನ್‌ಸ್ಟೆಬಲ್ ನೇಮಕಕ್ಕೆ ವಾರದಲ್ಲಿ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

Share. Facebook Twitter LinkedIn WhatsApp Email

Related Posts

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

1 Min Read

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

1 Min Read

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

1 Min Read
Recent News

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

​ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ: ಖಾದ್ಯ ತೈಲದ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ!

State News
KARNATAKA

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಮನಗರ: ಜಿಲ್ಲೆಯ ಬಿಡದಿ ಬಳಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕೃಷ್ಣರಾಜಪೇಟೆ (ಕೆ.ಆರ್. ಪೇಟೆ) ವಿಧಾನಸಭಾ ಕ್ಷೇತ್ರದ ಮಾಜಿ…

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.