Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತ’ ಏಷ್ಯಾದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಉಳಿಯಲಿದೆ ; ಫಿಚ್ ರೇಟಿಂಗ್ಸ್

12/02/2026 10:06 PM

ರಾಜ್ಯದಲ್ಲಿ ಆಧಾರ್ ಕಾರ್ಡ್ ತೋರಿಸಿ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸರ್ಕಾರ ಬ್ರೇಕ್

12/02/2026 10:03 PM

ತಪ್ಪು ಮತ್ತು ಊಹಾಪೋಹ : ಏರ್ ಇಂಡಿಯಾ ಅಪಘಾತ ತನಿಖೆಯ ಕುರಿತ ಇಟಾಲಿಯನ್ ಮಾಧ್ಯಮ ವರದಿ ತಳ್ಳಿಹಾಕಿದ ಭಾರತ

12/02/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜುಲೈ.4ರಂದು ನಿಗದಿಯಾಗಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಜುಲೈ.4ರಂದು ನಿಗದಿಯಾಗಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0926/06/2025 2:14 PM

ಬೆಂಗಳೂರು: “ಕೇಂದ್ರ ಸಚಿವ ಸೋಮಣ್ಣ ಅವರ ಮನವಿ ಮೇರೆಗೆ ಇದೇ ತಿಂಗಳು 30ರಂದು ನಡೆಯಬೇಕಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆಯನ್ನು ಜುಲೈ 4-5ಕ್ಕೆ ಮುಂದೂಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಸೋಮಣ್ಣ ಅವರು ಸ್ಥಳೀಯ ಸಂಸದರೂ ಆಗಿರುವ ಕಾರಣ ಅವರಿಗೆ ಅನುಕೂಲವಾಗುವಂತೆ ಸಭೆ ಮುಂದೂಡಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ:

“ಇಂದು ತುಮಕೂರಿನಲ್ಲಿ ಯೋಜನೆ ಕಾಮಗಾರಿಯ ಗುತ್ತಿಗೆದಾರರ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಪರಮೇಶ್ವರ್ ಅವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ಸಭೆ ನಾಳೆ ಅಥವಾ ನಾಡಿದ್ದು ನಡೆಯಲಿದೆ” ಎಂದು ಹೇಳಿದರು.

“ಆದ್ಯತೆ ಮೇರೆಗೆ ಎತ್ತಿನಹೊಳೆ ಯೋಜನೆಯನ್ನು ನಿಗದಿತ ಸಮಯದ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಈ ಯೋಜನೆ ಕಾಮಗಾರಿ ಪರಿಶೀಲನೆ ಮಾಡಲಾಗುತ್ತಿದೆ. ಈ ಯೋಜನೆಗೆ ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ಪರಿಶೀಲನೆ ಮಾಡಲು ನಾನು ತುಮಕೂರಿಗೆ ಭೇಟಿ ನೀಡಿದ್ದೇನೆ” ಎಂದರು.

“ನಾನು ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. ಈ ಭಾಗದಲ್ಲಿ ನೀರನ್ನು ಯಾವ ರೀತಿ ಸಂಗ್ರಹಿಸುವುದು ಎಂಬ ತಾಂತ್ರಿಕ ಸಾಧ್ಯತೆಗಳ ಪರಿಶೀಲನೆ ನಡೆಸುತ್ತಿದ್ದೇವೆ. ಈಗಾಗಲೇ ಸ್ಥಳೀಯ ನಾಯಕರು, ಗ್ರಾಮಸ್ಥರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಸಾರ್ವಜನಿಕರು ತಮ್ಮ ನೋವು ಹೇಳಿಕೊಂಡಿದ್ದಾರೆ. ಒಂದು ಕಡೆ ಅಣೆಕಟ್ಟು ನಿರ್ಮಾಣ ಮಾಡಬೇಕೆ, ಎರಡು ಕಡೆ ಮಾಡಬೇಕೆ ಅಥವಾ ಜನರ ಸಲಹೆಯಂತೆ ಕೆರೆಗಳನ್ನು ಬಳಸಿಕೊಂಡು ನೀರು ಸಂಗ್ರಹಿಸಬಹುದೇ ಎಂಬ ಸಾಧ್ಯತೆಗಳನ್ನು ಅಧ್ಯಯನ ಮಾಡಲಾಗುವುದು” ಎಂದು ತಿಳಿಸಿದರು.

ದೇಶಕ್ಕಾಗಿ ಪ್ರಾಣ ಕೊಟ್ಟಿರುವವರು ಇಂದಿರಾ ಗಾಂಧಿ

ಇಂದಿರಾ ಗಾಂಧಿ ಅವರನ್ನು ಬಿಜೆಪಿ ಹಿಟ್ಲರ್ ಗೆ ಹೋಲಿಕೆ ಮಾಡಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಕೇಳಿದಾಗ, “ಬಿಜೆಪಿಯಲ್ಲಿ ಸಮಸ್ಯೆ ಇದೆ. ತುರ್ತುಪರಿಸ್ಥಿತಿ ನಂತರ ದೇಶದ ಜನ ಇಂದಿರಾ ಗಾಂಧಿ ಅವರ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದೆ. 1980ರಲ್ಲೂ ಇಂದಿರಾ ಅವರು ದೇಶವನ್ನು ಮುನ್ನಡೆಸಿದ್ದಾರೆ. ಆ ಸಮಯದಲ್ಲಿ ಜನತಾ ಪರಿವಾರ ಅಥವಾ ಬೇರೆಯವರು ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಇಂದಿರಾ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಈಗ ಪ್ರಚಾರಕ್ಕಾಗಿ ಬಿಜೆಪಿ ಈ ವಿಚಾರವನ್ನು ಚರ್ಚೆಗೆ ತರುತ್ತಿದ್ದಾರೆ” ಎಂದು ಹೇಳಿದರು.

“ತುರ್ತುಪರಿಸ್ಥಿತಿ ಬಂದು 50 ವರ್ಷ ಆಗಿದೆ. ಈಗ ಅದು ಮುಗಿದ ಅಧ್ಯಾಯ. ಆಗಿನಿಂದ ಈಗಿನವರೆಗೂ ಕಾಂಗ್ರೆಸ್ ಆಡಳಿತದಲ್ಲಿ ದೇಶ ಬಲಿಷ್ಠವಾಗಿ ನಿಂತಿದೆ. ಬಿಜೆಪಿ ಆಡಳಿತದಲ್ಲಿ ಯಾವ ಪರಿಸ್ಥಿತಿ ಇದೆ ಎಂದು ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನಮ್ಮ ಸಹಮತವಿದೆ. ದೇಶ ಯಾವ ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿಯ ಸಂಸದರನ್ನೇ ವೈಯಕ್ತಿಕವಾಗಿ ಕೇಳಿ. ಅವರೇ ಹೇಳುತ್ತಾರೆ” ಎಂದು ತಿಳಿಸಿದರು.

BIG NEWS: ಆಡಳಿತದಲ್ಲಿ ಸಿಎಂ ಸಿದ್ಧರಾಮಯ್ಯ ಯಾವುದೇ ಹಿಡಿತ ಕಳೆದುಕೊಂಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಆಧಾರ್ ಕಾರ್ಡ್ ತೋರಿಸಿ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸರ್ಕಾರ ಬ್ರೇಕ್

12/02/2026 10:03 PM1 Min Read

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM1 Min Read

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM3 Mins Read
Recent News

‘ಭಾರತ’ ಏಷ್ಯಾದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಉಳಿಯಲಿದೆ ; ಫಿಚ್ ರೇಟಿಂಗ್ಸ್

12/02/2026 10:06 PM

ರಾಜ್ಯದಲ್ಲಿ ಆಧಾರ್ ಕಾರ್ಡ್ ತೋರಿಸಿ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸರ್ಕಾರ ಬ್ರೇಕ್

12/02/2026 10:03 PM

ತಪ್ಪು ಮತ್ತು ಊಹಾಪೋಹ : ಏರ್ ಇಂಡಿಯಾ ಅಪಘಾತ ತನಿಖೆಯ ಕುರಿತ ಇಟಾಲಿಯನ್ ಮಾಧ್ಯಮ ವರದಿ ತಳ್ಳಿಹಾಕಿದ ಭಾರತ

12/02/2026 9:49 PM

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM
State News
KARNATAKA

ರಾಜ್ಯದಲ್ಲಿ ಆಧಾರ್ ಕಾರ್ಡ್ ತೋರಿಸಿ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸರ್ಕಾರ ಬ್ರೇಕ್

By kannadanewsnow0912/02/2026 10:03 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆದರೇ ಕೆಲವೆಡೆ…

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಮೈದಾನದಲ್ಲಿ IPL ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ

12/02/2026 9:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.