ಶಿವಮೊಗ್ಗ : ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ. 21 ರಂದು ಬೆಳಗ್ಗೆ 10.00 ರಿಂದ ಸಂಜೆ 06-00ರವರೆಗೆ ಆಯನೂರು, ಕೋಹಳ್ಳಿ, ಮಂಟಘಟ್ಟ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಚನ್ನಳ್ಳಿ ವೀರಣ್ಣನಬೆನವಳ್ಳಿ, ಮೈಸವಳ್ಳಿ, ಕೊನಗವಳ್ಳಿ, ಸೇವಲಾಲ್‍ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ
ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮಾರ್ಚ್-2024ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಫೆ. 26 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ, ಫೆ. 27 ರಂದು ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಫೆ. 28 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ ಹಾಗೂ ಫೆ.29 ರಂದು ಶಿವಮೊಗ್ಗ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.