ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯಲ್ಲಿ ದಿನಾಂಕ 02-11-2025ರಂದು ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಈ ಕುರಿತಂತೆ ಸೊರಬ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ:02.11.2025 ರಂದು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಉಳವಿಯಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ 11 ಕೆವಿ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದ್ದಾರೆ.
ದಿನಾಂಕ:02.11.2025 ರಂದು ಉಳವಿ ಟೌನ್‌ನಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಫ್1 ಬರಗಿ ಎನ್‌ಜೆನ್ನೈ, ಎಫ್2 ಕಾನಳ್ಳಿ, ಎಫ್-3 ಉಳವಿ, ಎಫ್4 ಹೊಸಬಾಳೆ ಮತ್ತು ಎಫ್-5 ದೂಗೂರು ಫೀಡರ್‌ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ನ.2ರ ಕೆ-ಸೆಟ್ ಪರೀಕ್ಷೆಗೆ ಕೆಇಎ ಸಜ್ಜು: ಕ್ಯಾಮರಾ ಕಣ್ಗಾವಲಿನಲ್ಲಿ 11 ಜಿಲ್ಲೆಯ 316 ಕೇಂದ್ರಗಳಲ್ಲಿ ಪರೀಕ್ಷೆ
BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ
 
		



 




