ಚಿತ್ರದುರ್ಗ : ಪೋಕ್ಸೋ ಪ್ರಕರಣ ಸಂಬಂಧ ಜೈಲುಪಾಲಾಗಿರುವ ಮುರುಘಾ ಶ್ರೀಗಳು ಇದೀಗ ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಹೌದು, ಮಠದ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಜೈಲು ಪಾಲಾಗಿರುವ ಮುರುಘಾ ಶ್ರೀ ಜೈಲಿನಿಂದಲೇ ಚೆಕ್, ಮತ್ತಿತರ ದಾಖಲೆಗಳಿ ಸಹಿ ಹಾಕಲು ಅನುಮತಿ ಕೇಳಿದ್ದಾರೆ. ಮಠದ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ವೇತನ ನೀಡಿವ ಸಲುವಾಗಿ ಚೆಕ್ಗಳಿಗೆ ಸಹಿ ಹಾಕಲು ಅನುಮತಿ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿ ಮುರುಘಾ ಶರಣ ಪರ ವಕೀಲರು ಚಿತ್ರದುರ್ಗದ ಸೆಷನ್ ಕೋರ್ಟ್ಗೆ ಮನವಿ ಮಾಡಿದ್ದರು. ಆದ್ರೆ, ಕೋರ್ಟ್, ಅನುಮತಿ ನಿರಾಕರಿಸಿ ಸೆ.20ರಂದು ಆದೇಶ ಹೊರಡಿಸಿತ್ತು.ಇದೀಗ ಈ ಹಿನ್ನೆಲೆಯಲ್ಲಿ ಇದೀಗ ಮುರುಘಾ ಶರಣರು ಹೈಕೋರ್ಟ್ ಮೊರೆ ಹೋಗಿದ್ದಾರೆ.
BIG NEWS: ‘ರಾಜ್ಯ ಸರ್ಕಾರ’ದಿಂದ ಬಿಗ್ ಆರ್ಡರ್: ‘ಸರ್ಕಾರಿ ಕಚೇರಿ ಲಂಚ ಮುಕ್ತ’ಕ್ಕೆ ಖಡಕ್ ಕ್ರಮ