ಬೀದರ್: ಜಿಲ್ಲೆಗೆ ಲೋಕಸಭಾ ಚುನಾವಣೆಗಾಗಿ ಒಳ್ಳೆಯ ಅಭ್ಯರ್ಥಿಯನ್ನು ತನ್ನಿ ಎಂಬುದಾಗಿ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಾಲಿಗೆ ಬಿದ್ದು ಗೋಗರೆದ ಪ್ರಸಂಗ ಬೀದರ್ ನಲ್ಲಿ ನಡೆದಿದೆ.
ಇಂದು ಬೀದರ್ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತ್ರ ಬಿ.ವೈ ವಿಜಯೇಂದ್ರ ಭೇಟಿ ನೀಡಿದ್ದರು. ಅವರಿಗೆ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ ಸಮಾರಂಭ ಕೂಡ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರು ವೇದಿಕೆಯಲ್ಲೇ 2024ರಲ್ಲಿ ಲೋಕಸಭೆಗೆ ಒಳ್ಳೆಯ ಅಭ್ಯರ್ಥಿ ತನ್ನಿ ಎಂದು ಭಾಷಣ ಮಾಡುತ್ತಲೇ ದೀರ್ಘ ದಂಡ ನಮಸ್ಕಾರ ಮಾಡುತ್ತಲೇ ಮನವಿ ಮಾಡಿದ್ದಾರೆ.
ಇದಕ್ಕೂ ಮುನ್ನ ನನಗೆ 10 ವರ್ಷಗಳಿಂದ ಅನ್ಯಾಯವಾಗಿದೆ. ಬೀದರ್ ಗೆ ಒಳ್ಳೆಯ ಅಭ್ಯರ್ಥಿಯನ್ನು ನೀಡಿ. ಕಾರ್ಯಕರ್ತರನ್ನ ಜೈಲಿಗೆ ಕಳುಹಿಸುವವರು ಬೇಡ. ಕಾರ್ಯಕರ್ತರಿಂದಲೇ ನಾವಿದ್ದೇವೆ. ಕಾರ್ಯಕರ್ತರನ್ನ ಗೌರವಿಸೋರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು.
ಅಂದಹಾಗೇ ಗಡಿ ಜಿಲ್ಲೆ ಬೀದರ್ ನಲ್ಲಿ ಬಿಜೆಪಿಯಲ್ಲಿ ಅಮಸಾಧಾನದ ಹೊಗೆ ಆಡುತ್ತಿದೆ. ಕೇಂದ್ರ ಸಚಿವ ಭಗವಂತ್ ಖೂಬಾ ಹಾಗೂ ಮಾಜಿ ಸಚಿವ ಪ್ರಭು ಚೌವ್ಹಾಣ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಈ ನಡುವೆ ಇಂದು ಇಂತಹ ಪ್ರಸಂಗವೂ ನಡೆದಿದೆ.
ಶಿವಮೊಗ್ಗ: ಜ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
‘ರೈತ’ರಿಗೆ ಗುಡ್ ನ್ಯೂಸ್: ಶೇ.50ರಷ್ಟು ರಿಯಾಯಿತಿ ದರದಲ್ಲಿ ‘ಕೃಷಿ ಉಪಕರಣ’ ಪಡೆಯಲು ಅರ್ಜಿ ಆಹ್ವಾನ