ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಪ್ರಬಾವಿ ನಾಯಕ ಹೆಸರು ಇದ್ದು, ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
BIGG NEWS : ಶೀಘ್ರವೇ `: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ದ 25 ಅಭ್ಯರ್ಥಿಗಳ ಘೋಷಣೆ
ಬೆಂಗಳೂರಿನ ಬೆಳ್ಳಂದೂರು ಬಳಿಯ ಅಂಬಲಿಪುರ ನಿವಾಸಿ ಪ್ರದೀಪ್ ತಲೆಗೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡವನು. ಇಡೀ ಕುಟುಂಬವೇ ರೆಸಾರ್ಟ್ ಗೆ ಹೊಸ ವರ್ಷ ಆಚರಣೆಗೆ ಅಂತಾ ಬಂದಿದ್ದರು. ಸಂಜೆ ಪತ್ನಿ ಮುಂದಿನ ಕಾರಿನಲ್ಲಿ ಹೋಗುತ್ತಿದ್ದರು. ಹಿಂದೆ ಮತ್ತೊಂದು ಕಾರಿನಲ್ಲಿ ಪ್ರದೀಪ್ ಬರುತ್ತಿದ್ದನು. ಈ ವೇಳೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ಇನ್ನು ಸಾವಿಗೂ ಮುನ್ನ ಬರೆದಿದ್ದ ಡೆತ್ ನೋಟ್ ನಲ್ಲಿ ಶಾಸಕ ಅರವಿಂದ ಲಿಂಬಾಳಿ , ಗೋಪಿ ಕೆ. ಸೋಮಯ್ಯ , ಜಿ ರಮೇಶ್ ರೆಡ್ಡಿ , ಜಯರಾಮ್ ರೆಡ್ಡಿ, ರಾಘವ್ ಭಟ್ ಹೆಸರು ಉಲ್ಲೇಖಿಸಲಾಗಿದ್ದು, ಎಫ್ ಐ ಆರ್ ದಾಖಲಾಗಿದೆ. ಇದೀಗ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ.