Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ
KARNATAKA

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಲಸು ಮತ್ತು ಮಾವು ಪ್ರಿಯರಿಗಾಗಿ ಹಮ್ಮಿಕೊಳ್ಳಲಾಗಿರುವ ‘ಬೃಹತ್ ಹಲಸು ಮತ್ತು ಮಾವು ಮೇಳ’ವು ಜನಮನ ಸೆಳೆಯುತ್ತಿದ್ದು, ಯಶಸ್ವಿಯಾಗಿ ಎರಡನೇ ದಿನ ಪೂರೈಸಿದೆ. ಸಾಗರದ ಲಯನ್ಸ್ ಕ್ಲಬ್ ವತಿಯಿಂದ ‘ರಾಜರತ್ನ ಇವೆಂಟ್ಸ್’ ಹಾಗೂ ‘ಜನಸ್ನೇಹಿ ಇವೆಂಟ್ಸ್’ ಸಹಯೋಗದೊಂದಿಗೆ ಈ ಮೇಳವನ್ನು ಆಯೋಜಿಸಲಾಗಿದೆ.

ಮೇಳಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಭೇಟಿ

ಸಾಗರ ನಗರದ ಶ್ರೀ ರಾಘವೇಶ್ವರ ಭವನದಲ್ಲಿ ನಡೆಯುತ್ತಿರುವ ಈ ಬೃಹತ್ ಮೇಳದ ಎರಡನೇ ದಿನವಾದ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಭೇಟಿ ನೀಡಿ ವಿಶೇಷ ಗಮನ ಸೆಳೆದರು. ಮೇಳಕ್ಕೆ ಆಗಮಿಸಿದ ಸಚಿವರನ್ನು ಲಯನ್ಸ್ ಕ್ಲಬ್‌ನ ದ್ವಿತೀಯ ಜಿಲ್ಲಾ ಉಪ ಗೌರ್ನರ್ ಅಶ್ವಿನಿಕುಮಾರ್ ಹಾಗೂ ಸಾಗರ ತಾಲ್ಲೂಕು ಅಧ್ಯಕ್ಷರಾದ ಡಾ. ಪ್ರಸನ್ನ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಹಲಸಿನ ಖಾದ್ಯಗಳ ರುಚಿ ಸವಿದ ಸಚಿವರು

ಶ್ರೀರಾಘವೇಶ್ವರ ಭವನದಲ್ಲಿ ಪ್ರದರ್ಶನಗೊಂಡಿದ್ದ ವಿವಿಧ ಬಗೆಯ ಮಾವು ಮತ್ತು ಹಲಸಿನ ತಳಿಗಳನ್ನು ವೀಕ್ಷಿಸಿದ ಸಚಿವ ಪ್ರಹ್ಲಾದ್ ಜೋಷಿ ಅವರು, ಹಲಸಿನ ಹಣ್ಣಿನಿಂದ ತಯಾರಿಸಲಾಗಿದ್ದ ಬಗೆಬಗೆಯ ವಿಶಿಷ್ಟ ಖಾದ್ಯಗಳನ್ನು ಸವಿದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಚಿವರನ್ನು ಹಸಿರು ಶಾಲು ಹೊದಿಸಿ ಜಿಲ್ಲಾ ಉಪ ಗೌವರ್ನರ್ ಅಶ್ವಿನಿ ಕುಮಾರ್ ಸನ್ಮಾನಿಸಿದರೇ, ಮಾ.ಸಾ. ನಂಜುಂಡಸ್ವಾಮಿ ಅವರ ಪುಸ್ತಕವನ್ನು ನೀಡಿ ಗೌರವಿಸಲಾಯಿತು. ಜನಸ್ನೇಹಿ ಇವೆಂಟ್ಸ್‌ನ ಪ್ರಭಾಕರ ಮಂದಾರ್ತಿ ಹಾಗೂ ರಾಜರತ್ನ ಇವೆಂಟ್ಸ್‌ನ ಶರತ್ ಅವರು ಸಚಿವರಿಗೆ ಹಲಸಿನ ಸಸಿ ನೀಡಿ ಸನ್ಮಾನಿಸಿದರು.

ಗಣ್ಯರ ಉಪಸ್ಥಿತಿ

ಸಚಿವರ ಭೇಟಿಯ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ತೀರ್ಥಹಳ್ಳಿ ಶಾಸಕ ಹಾಗೂ ಮಾಜಿ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ಮುಖಂಡರಾದ ಟಿ.ಡಿ. ಮೇಘರಾಜ್, ಮಲ್ಲಿಕಾರ್ಜುನ ಹಕ್ರೆ, ಲಯನ್ಸ್ ಸಂಸ್ಥೆಯ ಅಶೋಕ್ ಬೇಳೂರು, ನಾಗರಾಜ್.ಇ ಹಾಗೂ ಮೇಳದ ಆಯೋಜಕರಾದ ಸಂತೋಷ್ ಲಿಂಗನಮಕ್ಕಿ ಸೇರಿದಂತೆ ಹಲವು ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

ನಾಳೆಯೇ ಕೊನೆಯ ದಿನ: ಆಯೋಜಕರ ಮನವಿ

ಜೂನ್ 5 ರಿಂದ ಆರಂಭವಾಗಿರುವ ಈ ಆಕರ್ಷಕ ಹಲಸು ಮತ್ತು ಮಾವು ಮೇಳವು ನಾಳೆಗೆ (ಭಾನುವಾರ) ಮುಕ್ತಾಯಗೊಳ್ಳಲಿದೆ.

  • ವಿಶೇಷತೆಗಳು: ಮೇಳದಲ್ಲಿ ಕೇವಲ ಹಣ್ಣುಗಳು ಮಾತ್ರವಲ್ಲದೆ, ರೈತರಿಗಾಗಿ ಉತ್ತಮ ತಳಿಯ ಹಲಸು ಮತ್ತು ಮಾವಿನ ಸಸಿಗಳು ಲಭ್ಯವಿವೆ.

  • ಗೃಹೋಪಯೋಗಿ ವಸ್ತುಗಳು: ಸಾರ್ವಜನಿಕರಿಗಾಗಿ ವಿವಿಧ ಬಗೆಯ ಗೃಹೋಪಯೋಗಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟವೂ ಇಲ್ಲಿದೆ.

ಸಾಗರ ತಾಲ್ಲೂಕು ಮತ್ತು ಸುತ್ತಮುತ್ತಲಿನ ಸಾರ್ವಜನಿಕರು ಹಾಗೂ ರೈತ ಬಾಂಧವರು ನಾಳೆ ಕೊನೆಯ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿಭಿನ್ನ ಹಣ್ಣುಗಳ ಸವಿ ಸವಿಯುವುದರ ಜೊತೆಗೆ ಮೇಳದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಸಾಗರ ಲಯನ್ಸ್ ಕ್ಲಬ್ ಸದಸ್ಯರು ಹಾಗೂ ಆಯೋಜಕರು ಪ್ರೀತಿಯಿಂದ ಆಹ್ವಾನಿಸಿದ್ದಾರೆ.

ವರದಿ: ವಸಂತ ಬಿ. ಈಶ್ವರಗೆರೆ, ಸಂಪಾದಕರು.

Share. Facebook Twitter LinkedIn WhatsApp Email

Related Posts

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

1 Min Read

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

1 Min Read

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

1 Min Read
Recent News

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

State News
KARNATAKA

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಲಸು ಮತ್ತು ಮಾವು ಪ್ರಿಯರಿಗಾಗಿ ಹಮ್ಮಿಕೊಳ್ಳಲಾಗಿರುವ ‘ಬೃಹತ್ ಹಲಸು ಮತ್ತು…

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.