Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಮಾಲೀಕರೇ ಗಮನಿಸಿ : ಇನ್ಮುಂದೆ ಗಾಡಿ `FC’ ಗೆ ಸಾರಿಗೆ ಇಲಾಖೆಯಿಂದ ಹೊಸ ನಿಯಮ ಜಾರಿ !

12/03/2026 1:07 PM

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಬಿಲ್‌ನಲ್ಲಿ ‘ಗ್ಯಾಸ್ ಚಾರ್ಜ್’ ಬರೆ; ಗ್ರಾಹಕರ ಜೇಬಿಗೆ ಕತ್ತರಿ!

12/03/2026 1:07 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ತೈಲ ಹಡಗುಗಳಿಗೆ ಯಾವುದೇ ಅನುಮತಿ ಕೊಟ್ಟಿಲ್ಲ : ಇರಾನ್ ಸ್ಪಷ್ಟನೆ

12/03/2026 1:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲ್ಯಾಣ ಕರ್ನಾಟಕದ 18 ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ: ಅಜಯ್ ಸಿಂಗ್
KARNATAKA

ಕಲ್ಯಾಣ ಕರ್ನಾಟಕದ 18 ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ: ಅಜಯ್ ಸಿಂಗ್

By kannadanewsnow0918/12/2024 8:16 PM

ಬೆಳಗಾವಿ ಸುವರ್ಣ ಸೌಧ : ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಹೊಸದಾಗಿ ರಚಿಸಲಾಗಿರುವ ಎಲ್ಲ 18 ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್ ಅವರು ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲಿ ಬುಧವಾರ ಉತ್ತರ ಕರ್ನಾಟಕದ ವಿಷಯಗಳ ಬಗ್ಗೆ ನಡೆದ ಚರ್ಚೆ ಸಂದರ್ಭದಲ್ಲಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ನೂತನವಾಗಿ ರಚಿಸಲಾಗಿರುವ 18 ಹೊಸ ತಾಲ್ಲೂಕುಗಳಲ್ಲಿ ಕೆಕೆಆರ್‌ಡಿಬಿ ಅನುದಾನ ವಿನಿಯೋಗಿಸಿ ಹೊಸದಾಗಿ ಪ್ರಜಾಸೌಧ ನಿರ್ಮಾಣ ಮಾಡಲಾಗುತ್ತಿದ್ದು, ಬರುವ ತಿಂಗಳಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಪ್ರಸಕ್ತ ವರ್ಷ ಕಲ್ಯಾಣ ಕರ್ನಾಟಕಕ್ಕೆ ಸರ್ಕಾರ 5000 ಕೋಟಿ ರೂ. ಅನುದಾನ ಒದಗಿಸಿದೆ ಎಂದರು.

ಕಲ್ಯಾಣ ಕರ್ನಾಟಕದ ರಾಯಚೂರು, ಕಲಬುರ್ಗಿ ಜಿಲ್ಲೆಯಲ್ಲಿ ಶಿಕ್ಷಣದಲ್ಲಿ ಹಿಂದುಳಿದಿದ್ದು, ಈ ಭಾಗಕ್ಕೆ ನೀಡಲಾಗಿರುವ ಅನುದಾನದಲ್ಲಿ ಶೇ. 25 ರಷ್ಟು ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಖರ್ಚು ಮಾಡಲು ನಿರ್ಧರಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು ಸರ್ಕಾರ ಕೈಗೊಂಡ ನಿರ್ಣಯದಂತೆ ಈ ವ್ಯಾಪ್ತಿಯ 1008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಶಿಕ್ಷಣ ಪ್ರಾರಂಭಿಸಲಾಗಿದೆ, ಸುಮಾರು 40 ಸಾವಿರ ಮಕ್ಕಳು ದಾಖಲಾಗಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಣ ಗುಣಮಟ್ಟದ ಸುಧಾರಣೆಯ ಪರಿಣಾಮ ಮುಂದಿನ ಮರ‍್ನಾಲ್ಕು ವರ್ಷಗಳ ಬಳಿಕ ಕಾಣಬಹುದಾಗಿದೆ. ಕಲ್ಯಾಣ ಕರ್ನಾಟಕದಲ್ಲಿನ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕೆಕೆಆರ್‌ಡಿಬಿ ವತಿಯಿಂದ 18.34 ಕೋಟಿ ರೂ. ವೆಚ್ಚದಲ್ಲಿ 2618 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ, ಅಲ್ಲದೆ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಹಿಂದುಳಿಯುವಿಕೆಯ ಕಾರಣ, ಪರಿಹಾರ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ವರದಿ ಸಲ್ಲಿಸಲು ಎಕ್ಸ್ಪರ್ಟ್ ಎಜುಕೇಶನ್ ಕಮಿಟಿ ರಚಿಸಲಾಗಿದೆ. ಡಾ. ಡಿ.ಎಂ. ನಂಜುAಡಪ್ಪ ಅವರ ವರದಿಯಂತೆ ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ 857 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ಈ ಭಾಗದಲ್ಲಿನ ನಿರುದ್ಯೋಗ ಸಮಸ್ಯೆ ನೀಗಿಸಲು ಉದ್ಯೋಗ ಆವಿಷ್ಕಾರ ಕಾರ್ಯಕ್ರಮ ರೂಪಿಸಿದ್ದು, ಸುಮಾರು 25 ಸಾವಿರ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕಲಿಕೆ ಜೊತೆಗೆ ಕೌಶಲ್ಯ ತರಬೇತಿ ನೀಡಲು ಕೊಪ್ಪಳ ಮತ್ತು ಕಲಬುರ್ಗಿಯಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೆಕೆಆರ್‌ಡಿಬಿ ವತಿಯಿಂದ 90 ಕೋಟಿ ರೂ. ವೆಚ್ಚದಲ್ಲಿ 224 ಹೊಸ ಬಸ್ ಖರೀದಿಸಲು ಕ್ರಮ ವಹಿಸಲಾಗಿದೆ. 156 ಕೋಟಿ ರೂ. ವೆಚ್ಚದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 34 ಹೊಸ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗಿದೆ, ಅಲ್ಲದೆ ಪ.ಜಾತಿ, ಪ.ಪಂಗಡದ ಹಾಸ್ಟೆಲ್‌ಗಳ ನಿರ್ಮಾಣಕ್ಕೆ 150 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸರ್ಕಾರ ಪ್ರತ್ಯೇಕ ಸಚಿವಾಲಯ, ಪ್ರತ್ಯೇಕ ಇಂಜಿನಿಯರಿAಗ್ ವಿಭಾಗ, ಇಂಟರ್‌ನಲ್ ಆಡಿಟ್ ಡಿವಿಜನ್ ಆಗಬೇಕು. ಈ ಭಾಗದಲ್ಲಿ ಹೆಚ್ಚು ತೊಗರಿ ಬೆಳೆಯುವುದರಿಂದ ತೊಗರಿ ಬೆಳೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ವಿಶೇಷ ಪ್ಯಾಕೇಜ್ ನೀಡಬೇಕು. ಮಲ್ಲಾಬಾದ್ ಏತನೀರಾವರಿ ಯೋಜನೆ ಆಗಬೇಕು. ಕೇಂದ್ರ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಆಗಬೇಕು ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್ ಸಿಂಗ್ ಮನವಿ ಮಾಡಿದರು.

ಮಂಡ್ಯ ಸಾಹಿತ್ಯ ಸಮ್ಮೇಳನದ ಕೊನೆ ದಿನ 45 ನಿಮಿಷಗಳ ‘ಪೊಲೀಸ್ ಬ್ಯಾಂಡ್’: MLC ದಿನೇಶ್ ಗೂಳಿಗೌಡ

ಪಿಂಚಣಿ ಅರ್ಜಿಗಳನ್ನು ಅಪ್ಲೋಡ್ ಮಾಡಲು ಉದ್ಯೋಗದಾತರಿಗೆ ಜ.31, 2025 ರವರೆಗೆ ವಿಸ್ತರಿಸಿದ EPFO – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

ವಾಹನ ಮಾಲೀಕರೇ ಗಮನಿಸಿ : ಇನ್ಮುಂದೆ ಗಾಡಿ `FC’ ಗೆ ಸಾರಿಗೆ ಇಲಾಖೆಯಿಂದ ಹೊಸ ನಿಯಮ ಜಾರಿ !

12/03/2026 1:07 PM1 Min Read

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಬಿಲ್‌ನಲ್ಲಿ ‘ಗ್ಯಾಸ್ ಚಾರ್ಜ್’ ಬರೆ; ಗ್ರಾಹಕರ ಜೇಬಿಗೆ ಕತ್ತರಿ!

12/03/2026 1:07 PM1 Min Read

BREAKING : ಹಾಲು ಉತ್ಪಾದಕರಿಗೆ ಯುಗಾದಿ ಬಂಪರ್ : ಲೀಟರ್ ಗೆ 1ರೂ. ಪ್ರೋತ್ಸಾಹ ಧನ ಘೋಷಿಸಿದ ‘ಬಮುಲ್’

12/03/2026 12:49 PM2 Mins Read
Recent News

ವಾಹನ ಮಾಲೀಕರೇ ಗಮನಿಸಿ : ಇನ್ಮುಂದೆ ಗಾಡಿ `FC’ ಗೆ ಸಾರಿಗೆ ಇಲಾಖೆಯಿಂದ ಹೊಸ ನಿಯಮ ಜಾರಿ !

12/03/2026 1:07 PM

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಬಿಲ್‌ನಲ್ಲಿ ‘ಗ್ಯಾಸ್ ಚಾರ್ಜ್’ ಬರೆ; ಗ್ರಾಹಕರ ಜೇಬಿಗೆ ಕತ್ತರಿ!

12/03/2026 1:07 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ತೈಲ ಹಡಗುಗಳಿಗೆ ಯಾವುದೇ ಅನುಮತಿ ಕೊಟ್ಟಿಲ್ಲ : ಇರಾನ್ ಸ್ಪಷ್ಟನೆ

12/03/2026 1:05 PM

BREAKING : ಹಾಲು ಉತ್ಪಾದಕರಿಗೆ ಯುಗಾದಿ ಬಂಪರ್ : ಲೀಟರ್ ಗೆ 1ರೂ. ಪ್ರೋತ್ಸಾಹ ಧನ ಘೋಷಿಸಿದ ‘ಬಮುಲ್’

12/03/2026 12:49 PM
State News
KARNATAKA

ವಾಹನ ಮಾಲೀಕರೇ ಗಮನಿಸಿ : ಇನ್ಮುಂದೆ ಗಾಡಿ `FC’ ಗೆ ಸಾರಿಗೆ ಇಲಾಖೆಯಿಂದ ಹೊಸ ನಿಯಮ ಜಾರಿ !

By kannadanewsnow5712/03/2026 1:07 PM KARNATAKA 1 Min Read

ಬೆಂಗಳೂರು: ರಾಜ್ಯದ ಆರ್‌ಟಿಒ (RTO) ಕಚೇರಿಗಳಲ್ಲಿ ನಡೆಯುತ್ತಿದ್ದ ಎಫ್‌ಸಿ (Fitness Certificate) ಅಕ್ರಮಗಳಿಗೆ ಸಾರಿಗೆ ಇಲಾಖೆ ಈಗ ಬ್ರೇಕ್ ಹಾಕಿದೆ.…

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಬಿಲ್‌ನಲ್ಲಿ ‘ಗ್ಯಾಸ್ ಚಾರ್ಜ್’ ಬರೆ; ಗ್ರಾಹಕರ ಜೇಬಿಗೆ ಕತ್ತರಿ!

12/03/2026 1:07 PM

BREAKING : ಹಾಲು ಉತ್ಪಾದಕರಿಗೆ ಯುಗಾದಿ ಬಂಪರ್ : ಲೀಟರ್ ಗೆ 1ರೂ. ಪ್ರೋತ್ಸಾಹ ಧನ ಘೋಷಿಸಿದ ‘ಬಮುಲ್’

12/03/2026 12:49 PM

ALERT : ಪೋಷಕರೇ ಎಚ್ಚರ : ಮಕ್ಕಳ ಕಣ್ಣಿಗೆ ಹಚ್ಚುವ ಕಾಡಿಗೆಯಿಂದ ದೃಷ್ಟಿ, ಮೆದುಳಿಗೆ ಅಪಾಯ!

12/03/2026 12:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.