ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ದಾಖಲಾಗುವ ಮುನ್ನ ವಿದೇಶ ಪ್ರವಾಸ ಹೋಗಿದ್ದರು. ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಆಗಲು ಪ್ರೈಟ್ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಹೌದು ಬೆಂಗಳೂರಿಗೆ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ 30ರಂದು ಮಧ್ಯಾಹ್ನ ಜರ್ಮನಿಯಲ್ಲಿ ಫೈಟ್ ಹತ್ತಲಿದ್ದಾರೆ. ಅವರು ಬೆಂಗಳೂರಿಗೆ ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್‌ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಪ್ರಜ್ವಲ್ ಬಂಧನಕ್ಕೆ ಕಾಯುತ್ತಿದ್ದಾರೆ ಎನ್ನಲಾಗಿದೆ.
ಲುಫ್ತಾನ್ನಾ ಏರ್‌ಲೈನ್ಸ್ ಮೂಲಕ ಫೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಗುರುವಾರ ಮಧ್ಯಾಹ್ನ 12.05ಕ್ಕೆ ಮ್ಯೂನಿಚ್‌ನಲ್ಲಿ ಫೈಟ್ ಹತ್ತಲಿದ್ದಾರೆ. ಮಧ್ಯರಾತ್ರಿ 12.30ಕ್ಕೆ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ ಎಂದು ಈಗಾಗಲೇ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಇದಕ್ಕಾಗಿ ಎಸ್ಐಟಿ ಅಧಿಕಾರಿಗಳು ಕೆಂಪೇಗೌಡ ವಿಮಾನ ನಿಲ್ದಾನದಲ್ಲಿ ನಿಗಾ ಇಟ್ಟಿದ್ದಾರೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮತ್ತು ಅರೆಸ್ಟ್ ವಾರಂಟ್ ಸಹ ಜಾರಿಯಾಗಿದೆ. ಹೀಗಾಗಿ ಯಾವ ವಿಮಾನದಲ್ಲಿ ಪ್ರಜ್ವಲ ಬರುತ್ತಾರೆ ಎಂದು ಎಸ್ಐಟಿ ಮಾಹಿತಿ ಪಡೆದುಕೊಂಡು ವಶಕ್ಕೆ ಪಡೆಯಲಿದೆ.
ಮೇ 31ರ ಬೆಳಗ್ಗೆ 10:30ಕ್ಕೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವೆ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಂತೆ ಮೇ 31ರಂದು ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ವಿಮಾನ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಮೇ 30ರ ಮಧ್ಯರಾತ್ರಿ 12:30ಕ್ಕೆ (AM) ಬಂದಿಳಿಯಲಿದೆ. ಹೀಗಾಗಿ ಪ್ರಜ್ವಲ್ ಆ ಸಮಯದಲ್ಲಿ ವಿಚಾರಣೆಗೆ ಹಾಜರಾಗುವುದಿಲ್ಲ. ಬದಲಿಗೆ ಮೇ 31ರ ಬೆಳಿಗ್ಗೆ ವಿಚಾರಣೆಗೆ ಹಾಜರಾಗಹುದು.
ಅದಕ್ಕೂ ಮೊದಲು ಇಮಿಗ್ರೇಷನ್ ಅಧಿಕಾರಿಗಳು ಪ್ರಜ್ವಲ್ ವಶಕ್ಕೆ ಪಡೆಯಲಿದ್ದಾರೆ. ಬಳಿಕ ಎಸ್ಐಟಿಗೆ ಒಪ್ಪಿಸಲಿದ್ದಾರೆ. ಅದಾದ ಬಳಿಕ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡು ಮೊದಲಿಗೆ ಅವರಿಗೆ ಮೆಡಿಕಲ್ ಚೆಕಪ್ ಮಾಡಿಸಲಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಲಿದ್ದಾರೆ.