ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರೆನ್ ಡ್ರೈವ್ ಪ್ರಕರಣಕ್ಕೆ ಈಗ ಮತ್ತೊಂದು ಟ್ವಿಸ್ಟ್ ನೀಡಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗದಿಂದ ಈ ಟ್ವಿಸ್ಟ್ ನೀಡಲಾಗಿದೆ. ಅದೇ ಸಂತ್ರಸ್ತೆಗೆ ಮೂವರಿಂದ ಬೆದರಿಕೆ ಹಾಕಲಾಗಿದೆ ಎಂಬುದಾಗಿದೆ.
ಇಂದು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವಂತ ರಾಷ್ಟ್ರೀಯ ಮಹಿಳಾ ಆಯೋಗವು, ಅದರಲ್ಲಿ ಪ್ರಜ್ವಲ್ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವಂತ ಒಬ್ಬರು ದೂರು ನೀಡಿದ್ದಾರೆ. ಅದರಲ್ಲಿ ಮೂವರಿಂದ ಬೆದರಿಕೆ ಬಂದಿರೋದಾಗಿ ತಿಳಿಸಿದ್ದಾರೆ ಎಂಬುದಾಗಿ ತಿಳಿಸಿದೆ.
ರಾಷ್ಟ್ರೀಯ ಮಹಿಳಾ ಆಯೋಗ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಏನಿದೆ?
ಕರ್ನಾಟಕ ಪೊಲೀಸ್ ಹೆಸರಿನಲ್ಲಿ ಸಾಮಾನ್ಯ ಉಡುಪು ಧರಿಸಿದ್ದ ಮೂವರು ವ್ಯಕ್ತಿಗಳ ಮೇಲೆ ಮಹಿಳೆಯೋಬ್ಬರು ದೂರು ನೀಡಿದ್ದಾರೆ. ತಮ್ಮನ್ನು ಕರ್ನಾಟಕ ಪೊಲೀಸ್ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸುಳ್ಳು ದೂರು ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಿದ್ದಾರೆ. ವಿವಿಧ ದೂರವಾಣಿ ಸಂಖ್ಯೆಗಳ ಮೂಲಕ ಕರೆ ಮಾಡಿ ದೂರು ನೀಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಸಂತ್ರಸ್ತೆ ತನ್ನ ಕುಟುಂಬದ ಹಿತಕ್ಕಾಗಿ ರಕ್ಷಣೆ ಕೋರಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿ ತೋರಿಸುತ್ತದೆ ಎಂದು ತಿಳಿಸಿದೆ.
ಒಟ್ಟಿನಲ್ಲಿ ಒಂದೆಡೆ ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಆದರೆ ಇತ್ತ ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ ಎಂದು ಹೇಳಿದೆ. ಈ ಮೂಲಕ ರಾಷ್ಟ್ರೀಯ ಮಹಿಳಾ ಆಯೋಗವು ಪ್ರಜ್ವಲ್ ಪೆನ್ ಡ್ರೈವ್ ಕೇಸಿಗೆ ಸ್ಪೋಟಕ ಟ್ವಿಸ್ಟ್ ನೀಡಿದೆ.
ಬೆಂಗಳೂರಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತು ಯಾವುದೇ ನಿರ್ಬಂಧ ವಿಧಿಸಿಲ್ಲ: BBMP ಸ್ಪಷ್ಟನೆ
ನಿಮ್ಮ ‘ಏರ್ ಇಂಡಿಯಾ ಎಕ್ಸ್ಪ್ರೆಸ್’ ವಿಮಾನ ರದ್ದಾಗಿದ್ಯಾ? ಮರುಪಾವತಿ ಪಡೆಯಲು ಈ ‘ವಾಟ್ಸಾಪ್ ಸಂಖ್ಯೆ’ ಸಂಪರ್ಕಿಸಿ