ಹಾಸನ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳ (SIT) ಮಹತ್ವದ ಹೆಜ್ಜೆ ಇಟ್ಟಿದೆ. ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪದಡಿ ಹಾಸನ ಸಿವಿಲ್ ಕೋರ್ಟ್‌ಗೆ ಬರೋಬ್ಬರಿ 13,712 ಪುಟಗಳ ಸುದೀರ್ಘ ಚಾರ್ಜ್‌ಶೀಟ್ (ದೋಷಾರೋಪ ಪಟ್ಟಿ) ಸಲ್ಲಿಸಲಾಗಿದೆ.
70 ಪೆನ್‌ಡ್ರೈವ್‌ಗಳ ಖರೀದಿ ರಹಸ್ಯ ಬಯಲು: ಅಶ್ಲೀಲ ವಿಡಿಯೋಗಳನ್ನು ಸಾರ್ವಜನಿಕವಾಗಿ ಹಂಚಲು ಆರೋಪಿಗಳು ವ್ಯವಸ್ಥಿತ ಸಂಚು ರೂಪಿಸಿದ್ದರು ಎಂಬುದು ತನಿಖೆಯಿಂದ ದೃಢಪಟ್ಟಿದೆ. ಇದಕ್ಕಾಗಿ ಹಾಸನದಲ್ಲೇ 70 ಹೊಸ ಪೆನ್‌ಡ್ರೈವ್‌ಗಳನ್ನು ಖರೀದಿ ಮಾಡಲಾಗಿತ್ತು ಎಂಬ ಆಘಾತಕಾರಿ ಅಂಶ ಎಸ್‌ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತಾಂತ್ರಿಕ ವರದಿಗಳು ಮತ್ತು ಎಫ್‌ಎಸ್‌ಎಲ್ (FSL) ಸಾಕ್ಷ್ಯಗಳನ್ನು ಆಧರಿಸಿ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.
39 ಮಂದಿ ಆರೋಪಿಗಳ ಪಟ್ಟಿ: ಈ ಪ್ರಕರಣದಲ್ಲಿ ಒಟ್ಟು 52 ಮಂದಿಯ ಹೆಸರನ್ನು ಉಲ್ಲೇಖಿಸಲಾಗಿತ್ತು. ಆದರೆ, ಸದ್ಯ ಲಭ್ಯವಿರುವ ಸಾಕ್ಷ್ಯಾಧಾರಗಳ ಮೇರೆಗೆ 39 ಮಂದಿಯ ವಿರುದ್ಧ ದೋಷಾರೋಪ ಹೊರಿಸಲಾಗಿದೆ. ವಕೀಲ ಪೂರ್ಣಚಂದ್ರ ಅವರು ನೀಡಿದ್ದ ದೂರಿನನ್ವಯ ದಾಖಲಾಗಿದ್ದ ಎಫ್‌ಐಆರ್ ಆಧಾರದ ಮೇಲೆ ಈ ಕ್ರಮ ಜರುಗಿಸಲಾಗಿದೆ.
ಪ್ರಮುಖ ಆರೋಪಿಗಳು: ದೋಷಾರೋಪ ಪಟ್ಟಿಯಲ್ಲಿರುವ ಪ್ರಮುಖ ಹೆಸರುಗಳು ಹೀಗಿವೆ:
-
A1 ನವೀನ್, A2 ಕಾರ್ತಿಕ್ (ಪ್ರಜ್ವಲ್ ಕಾರು ಚಾಲಕ), A3 ಚೇತನ್ ಬಿ.ಸಿ.
-
ದೇವರಾಜೇಗೌಡ (A6), ಲಿಖಿತ್ ಗೌಡ (A5), ಗಿರೀಶ್ (A7), ನಿಶಾಂತ್ (A9).
-
ಹಾಗೂ ನಾಗೇಂದ್ರ ಜೈನ್, ಸಮೀರ್ ಅಹ್ಮದ್, ಬಾಲಸುಬ್ರಹ್ಮಣ್ಯ ಸೇರಿದಂತೆ ಒಟ್ಟು 39 ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಲು ಎಸ್‌ಐಟಿ ಶಿಫಾರಸು ಮಾಡಿದೆ.
ಹೈಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್: ಮತ್ತೊಂದೆಡೆ, ಅತ್ಯಾಚಾರ ಪ್ರಕರಣದಲ್ಲಿ ಈಗಾಗಲೇ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ, ತಮಗೆ ವಿಧಿಸಲಾಗಿರುವ ಶಿಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಡಿಎನ್‌ಎ ಮತ್ತು ಡಿಜಿಟಲ್ ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಅವರು ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್‌ನ ವಿಭಾಗೀಯ ಪೀಠವು ಎಸ್‌ಐಟಿಗೆ ಸೂಚನೆ ನೀಡಿದೆ.
ಈ ಬೃಹತ್ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದ್ದು, ಮುಂದಿನ ದಿನಗಳಲ್ಲಿ ನ್ಯಾಯಾಲಯದ ವಿಚಾರಣೆ ಕುತೂಹಲ ಕೆರಳಿಸಿದೆ.
SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕೋಲಾರದಲ್ಲಿ ಹೆಡ್ ಕಾನ್ಸ್ಟೇಬಲ್ ಸಾವು!








