ಚಿಕ್ಕಮಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಗಾಗಿ ಎಸ್ಐಟಿ ಅಧಿಕಾರಿಗಳು ಶೋಧ ಕಾರ್ಯವನ್ನು ಚುರುಕುಗೋಳಿಸಿದ್ದಾರೆ.
ಹೌದು ಸಂತ್ರಸ್ತೆ ವಿಡಿಯೋ ಚಿತ್ರಿಕರಿಸಿದ ಚಾಲಕ ಅಜಿತ್ ಗಾಗಿ ಎಸ್ಐಟಿ ಹುಡುಕಾಟ ನಡೆಸಿದ್ದಾರೆ. ಚಿಕ್ಕಮಗಳೂರಿನ ಕಲ್ಯಾಣ ನಗರದ ಮಾವನ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ.ಆರು ದಿನದ ಹಿಂದೆ ಅಜಿತ್ ಮಾವ ಅವರ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ನೆಡೆಸಿದ್ದರು.ರಾತ್ರಿಯ ವೇಳೆ ದಿನೇಶ್ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ನಡೆಸಿದರು.
ಶೋಧ ನಡೆಸಿದ ನಂತರ ದಿನೇಶ್ ಮನೆಗೆ ಬೀಗ ಹಾಕಿ ಇದೀಗ ತೆರಳಿದ್ದಾರೆ.ಸಂತ್ರಸ್ತೆ ಹೇಳಿಕೆಯನ್ನು ರೆಕಾರ್ಡ್ ಮಾಡಿ ಅಜಿತ್ ವೈರಲ್ ಮಾಡಿದ್ದ ಎನ್ನಲಾಗುತ್ತಿದೆ. ಸಂತ್ರಸ್ತೆ ಹೇಳಿಕೆ ವೈರಲ್ ಬೆನ್ನಲ್ಲೇ ಅಜಿತ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸಂತ್ರಸ್ತೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪ ಕೇಳಿಬಂದಿತ್ತು.
ಅಜಿತ್ ವಿರುದ್ಧ ಎಫ್ಐಆರ್ ದಾಖಲಿಸಿ ಎಸ್ಐಟಿ ಹುಡುಕಾಟ ನಡೆಸುತ್ತಿದ್ದು ಇವರಿಗೆ ಅಜಿತ್ ಬಂದನವಾಗಿಲ್ಲವೆಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಎಸ ಐ ಟಿ ಅಧಿಕಾರಿಗಳು ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.