ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಕೇಸ್ ನಿಂದಾಗಿ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಗೆ ಯಾವುದೇ ಧಕ್ಕೆ ಉಂಟಾಗೋದಿಲ್ಲ. ಈ ಪ್ರಕರಣ ವೈಯಕ್ತಿಕ ಜಗಳವಾಗಿದೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಪಕ್ಷದವರು ರಾಜ್ಯದಲ್ಲಿನ ಅಭಿವೃದ್ಧಿಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಬರೀ ಪೆನ್ ಡ್ರೈವ್ ಕೇಸ್ ಬಗ್ಗೆ ಚರ್ಚೆ ಮಾಡ್ತಿದ್ದಾರೆ. ಯಾರೇ ಆಗಲೀ ಈ ಕೃತ್ಯದಲ್ಲಿ ಭಾಗಿಯಾಗಿದ್ರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲಿ ಎಂದರು.

ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಭವಿಷ್ಯವಿಲ್ಲ. ಶಾಸಕರು ಅಸಮಾಧಾನಗೊಂಡಿದ್ದಾರೆ. ಅದು ಅಭಿವೃದ್ಧಿಗೆ ಅನುದಾನ ನೀಡದೇ ಇರೋ ಕಾರಣದಿಂದ ಆಗಿದೆ. ಹೀಗಾಗಿ ರಾಜ್ಯ ಸರ್ಕಾರದ ಬುಡ ಅಲುಗಾಡುತ್ತಿದೆ. ಚುನಾವಣೆ ಬಳಿಕ ಈ ಸರ್ಕಾರ ಪತನ ಗ್ಯಾರಂಟಿ ಎಂದರು.

ಕಲಬುರ್ಗಿಯಲ್ಲಿ ರಾಜಕೀಯ ವೈಷಮ್ಯಕ್ಕೆ ವ್ಯಕ್ತಿಯ ಹತ್ಯೆ : ಕಾಂಗ್ರೆಸ್ ಪರ ಪ್ರಚಾರ ಮಾಡಿದಕ್ಕೆ ಕೊಲೆ

BREAAKING: ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ಗೆ ಮಧ್ಯಂತರ ಜಾಮೀನು ಮಂಜೂರು | CM Arvind Kejriwal

Share.
Exit mobile version