ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿದ್ದು, ಸದ್ಯಕ್ಕೆ ಅವರು ಭಾರತಕ್ಕೆ ಮರಳುವ ಯಾವುದೇ ಸಾಧ್ಯತೆ ಇಲ್ಲ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಂತ್ರಸ್ತರು ನಮಗೆ ನ್ಯಾಯ ಬೇಕು ಎಂದು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೌದು ಪ್ರಜ್ವಲ್ ಅಶ್ಲೀಲ ವಿಡಿಯೋ ಪತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಇದುವರೆಗೂ ವಿದೇಶದಲ್ಲಿರುವ ಪ್ರಜ್ವಲ್ ಭಾರತಕ್ಕೆ ವಾಪಸ್ ಆಗಿಲ್ಲ ಹಾಗಾಗಿ ಸಂತ್ರಸ್ತರು ನಮಗೆ ನ್ಯಾಯ ಸಿಗಬೇಕು ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕೇಸ್ ಸಿಬಿಐಗೆ ವಹಿಸುವ ಸಾಧ್ಯತೆ
ಪ್ರಜ್ವಲ್ ಕೇಸ್ ಅನ್ನು SIT ಇಂದ ಸಿಬಿಐಗೆ ವರ್ಗಾಯಿಸಲು ಚಿಂತನೆ ನಡೆಸಲಾಗಿದೆ.ಎಸ್ಐಟಿಗೆ ತನ್ನದೇ ಆದಂತಹ ವ್ಯಾಪ್ತಿ ಇರುವ ಹಿನ್ನೆಲೆಯಲ್ಲಿ ತನಿಖೆ ಮಾಡುವುದು ಕಷ್ಟವಾಗಿದೆ. ಹಾಗಾಗೀ ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಲು ಚಿಂತನೆ ನಡೆಸಲಾಗಿದೆ. ಅಲ್ಲದೆ ಸಂತ್ರಸ್ತರು ಕೋರ್ಟಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು, ನಮಗೆ ನ್ಯಾಯ ಸಿಗಬೇಕು ಎಂದು ಹೈಕೋರ್ಟಿಗೆ ಸಂತ್ರಸ್ತರಿಂದ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.