ಬೆಂಗಳೂರು : ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೆ ಮೊದಲ ಬಾರಿಗೆ ಮಾಜಿ ಶಾಸಕ HD ರೇವಣ್ಣ ಅವರು ಮಗ ಪ್ರಜ್ವಲ್ ನನ್ನು ಭೇಟಿ ಮಾಡಲು ಜೈಲಿಗೆ ಆಗಮಿಸಿದ್ದಾರೆ ಎನ್ನಲಾಗಿದೆ.

ಹೌದು, ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಪ್ರಜ್ವಲ್ ರೇವಣ್ಣ ಈಗ ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದಾರೆ. ಸೋಮವಾರ ಭವಾನಿ ರೇವಣ್ಣ ಮಗನನ್ನು ನೋಡಲು ಬಂದಿದ್ದರು. ಈಗ ಮಗನನ್ನು ನೋಡಲು ಹೆಚ್‌ಡಿ ರೇವಣ್ಣ ಆಗಮಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಆಗಮಿಸಿ, ಪರಪ್ಪನ ಅಗ್ರಹಾರ ಕ್ವಾರಂಟೈನ್​ ಜೈಲಿನಲ್ಲಿರುವ ಪುತ್ರ ಪ್ರಜ್ವಲ್​​ನ್ನು ಭೇಟಿ ಆಗಿದ್ದಾರೆ. ಈ ವೇಳೆ ಸುಮಾರು 30 ನಿಮಿಷ ಮಾತನಾಡಿದ ಅವರು, ಮುಂದಿನ ಕಾನೂನು ಹೋರಾಟದ ಕುರಿತು ಮಗನ ಜೊತೆ ಚರ್ಚೆ ಮಾಡಿ ಹೊರಬಂದಿದ್ದಾರೆ. ಇನ್ನು ಇದೇ ಜುಲೈ 1ರಂದು ತಾಯಿ ಭವಾನಿ, ಪ್ರಜ್ವಲ್ ಭೇಟಿಯಾಗಿ ತೆರಳಿದ್ದರು. ಅದರ ಬೆನ್ನಲ್ಲೇ ಇದೀಗ ತಂದೆ ಆಗಮಿಸಿದ್ದಾರೆ.

ಇನ್ನು 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಸಷೇನ್ಸ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕೃರಿಸಿದ ಬೆನ್ನಲ್ಲೆ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಇನ್ನೊಂದು ಕಡೆ ಮತ್ತೋರ್ವ ಪುತ್ರ ಸೂರಜ್​ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಸ್​ಗೆ ಸಂಬಂಧಿಸಿದ ಸೂರಜ್ ಜಾಮೀನು ಅರ್ಜಿ ವಿಚಾರಣೆಯನ್ನ ನ್ಯಾಯಾಲಯ ನಾಳೆಗೆ ಮುಂದೂಡಿದ್ದು, ನಾಳೆ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿ ಪರ ವಕೀಲರಿಗೆ ಸೂಚನೆ ನೀಡಿದೆ.

Share.
Exit mobile version