ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೇಶದಿಂದ ದೇಶಕ್ಕೆ ಜಿಗಿಯುತ್ತ ತಲೆಮರಿಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗ ಎಸ್ಐಟಿ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಕೋರ್ಟ್ ಮೂಲಕ ವಾರೆಂಟ್ ಜಾರಿ ಮಾಡುವ ಮುಖಾಂತರ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ಗೆ ವಿಚಾರಣೆಗೆ ಹಾಜರಾಗುವಂತೆ ಹಲವಾರು ಬಾರಿ ನೋಟಿಸ್ ನೀಡಿದ್ದರು. ಅಲ್ಲದೆ ಸಿಐಡಿ ಮುಖಾಂತರ ರೆಡ್ ಕಾರ್ನರ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಆದರೂ ಕೂಡ ಪ್ರಜ್ವಲ್ ರೇವಣ್ಣ ಯಾವುದೇ ನೋಟಿಸ್ ಗೂ ಸರಿಯಾದ ರೀತಿ ಸ್ಪಂದಿಸಲಿಲ್ಲ. ಹಾಗಾಗಿ ಇದೀಗ ಕೋರ್ಟ್ ಮುಖಾಂತರ ವಾರಂಟ್ ಜಾರಿ ಮಾಡಲು ಎಸ್ಐಟಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜ್ವಲ್ ಬ್ಯಾಂಕ್ ಖಾತೆ ಬಂದ್ ಮಾಡಲು ಮುಂದಾದ SIT
ಸದ್ಯ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ಜರ್ಮನ್ ನಿಂದ ಲಂಡನ್ ಗೆ ಪ್ರಯಾಣಿಸಿ ಅಲ್ಲಿ ವಾಸ್ತವ್ಯ ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಬಂದಿದೆ. ಈ ನಡುವೆ ಪ್ರಜ್ವಲ್ ರೇವಣ್ಣನವರ ಬ್ಯಾಂಕ್ ಖಾತೆಗೆ ಭಾರತದಿಂದ ಹಣವನ್ನು ಹಾಕಿದ್ದಾರೆ ಎನ್ನಲಾಗಿದೆ. ಈ ನಡುವೆ ಪ್ರಜ್ವಲ್ ರೇವಣ್ಣನೊಂದಿಗೆ ಇಬ್ಬರು ಸ್ನೇಹಿತರು ಕೂಡ ಇದ್ದು, ಅದರಲ್ಲಿ ಒಬ್ಬರು ಬೆಂಗಳೂರಿನವರು, ಮತ್ತೊಬ್ಬರು ದುಬೈ ಮೂಲದವರು ಎನ್ನಲಾಗಿದೆ.
ಇನ್ನೂ ಸಂಸದರಿಗೆ ಬ್ಯಾಂಕ್ ಖಾತೆ ಬಂದ್ ಮಾಡುವ ಸಲುವಾಗಿ ಕೋರ್ಟ್‌ನಿಂದ ಅನುಮತಿ ಪಡೆದುಕೊಳ್ಳುವ ಸಲುವಾಗಿ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ. ಇನ್ನೂ ಹಲವು ಮಂದಿ ಕೂಡ ವಿದೇಶದಲ್ಲಿ ಅವರಿಗೆ ಸಹಾಯ ನೀಡುತ್ತಿರುವುದು ಈಗ ಎಸ್‌ಐಟಿ ಅಧಿಕಾರಿಗಳಿಗೆ ತಲೆನೋವಾಗಿದೆ.ಇದಲ್ಲದೇ ಕೆಲವು ಮಂದಿ ಲಂಡನ್‌ಗೆ ತೆರಳುವುದಕ್ಕೆ ಹಾಸನ ಮೂಲದ ಉದ್ಯಮಿಯೊಬ್ಬರು, ಸದ್ಯ ಲಂಡನ್‌ನಲ್ಲಿದ್ದು ಅವರು ಪ್ರಜ್ವಲ್ ಅವರಿಗೆ ಸಹಾಯ ಮಾಡಿದ್ದಾರೆ ಎನ್ನಲಾಗಿದೆ.