ಚಿತ್ರದುರ್ಗ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಈ ಬಗ್ಗೆ ಕುಮಾರಸ್ವಾಮಿ ಪುತ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಏನು ಹೇಳಿದ್ದಾರೆ ಅಂತ ಮುಂದೆ ಓದಿ.
ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಸ್ಕಲ್ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕೋರ್ಟ್ ತೀರ್ಪಿಗೆ ಯಾರೇ ಆದರೂ ತಲೆ ಬಾಗಲೇಬೇಕು. ಆ ಬಗ್ಗೆ ಬೇರೆ ಮಾತನಾಡುವ ಅಗತ್ಯವೇ ಇಲ್ಲ ಎಂಬುದಾಗಿ ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್ ನಲ್ಲಿ ಆದೇಶ ಪ್ರಕಟಗೊಂಡ ನಂತ್ರ ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ ಎಂಬುದಾಗಿ ಹೇಳಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಆರೋಪ ಬಂದ ಬಳಿಕ ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ನಮ್ಮ ಪಕ್ಷದ ವರಿಷ್ಠರು ಪ್ರಜ್ವಲ್ ರೇವಣ್ಣ ಅವರನ್ನು ಅಮಾನತ್ತಿನಲ್ಲಿಟ್ಟಿದ್ದರು. ಆಗ ಅಪರಾಧಿಯೋ ಅಥವಾ ಇಲ್ಲವೋ ಎಂಬುದಾಗಿ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಬಗ್ಗೆ ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಿ ಎಂದರು.
BREAKING: ಶಾಲಾ ಮಕ್ಕಳ ಕುಡಿಯುವ ನೀರಿಗೆ ವಿಷ ಬೆರೆಸಿದ್ದ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್