ಬೆಂಗಳೂರು : ಹಾಸನ ಜಿಲ್ಲೆಯ ಹೊಳೆ ನರಸೀಪುರ ತಾಲೂಕಿನ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ಅಲ್ಲಿ ನಡೆಯಿತು. ಸರ್ಕಾರದ ಪರ ವಕೀಲ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲರ ವಾದ ಮತ್ತು ಪ್ರತಿವಾದ ಆಲಿಸಿದ ನ್ಯಾಯಾಲಯವು ಜುಲೈ 2ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿತು.
ಸರ್ಕಾರದ ಪರವಾಗಿ ಎಸ್ಪಿಪಿ ಪ್ರೊಫೆಸರ್ ರವಿವರ್ಮ ಕುಮಾರ್ ಅವರು ವಾದ ಮಂಡಿಸಿದರು. ಸುಪ್ರೀಂಕೋರ್ಟ್ ಕೂಡ ಪ್ರಜ್ವಲ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಬದಲಾದ ಪರಿಸ್ಥಿತಿ ಇದ್ದರೆ ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಬಹುದು. ಆದರೆ ಪ್ರಕ್ರಿಯೆ ಉಲ್ಲಂಘಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವಾದಿಸಿದರು. ಬಳಿಕ ಹೈಕೋರ್ಟ್ ಜುಲೈ 2ಕ್ಕೆ ವಿಚಾರಣೆಯನ್ನು ಮುಂದೂಡಿತು.