ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ಯಾರ ಸಂಪರ್ಕದಲ್ಲೂ ಇಲ್ಲ ಎಂಬುದಾಗಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಶ್ಲೀಲ ವೀಡಿಯೋ ಆರೋಪ ಕೇಳಿ ಬಂದ ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಅವರು ಎಲ್ಲಿಗೆ ಹೋದರು, ಏಕೆ ಹೋದ್ರು, ಯಾವಾಗ ಬರ್ತಾರೆ ಎಂಬುದು ಯಾರಿಗೂ ಮಾಹಿತಿ ಇಲ್ಲ ಎಂದರು.
ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಅಂತ ಮನೆಯವರಿಗೂ ಮಾಹಿತಿ ಇಲ್ವಂತೆ. ಅವರನ್ನು ಪತ್ತೆ ಹಚ್ಚಲು ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ಕೊಟ್ಟಿದ್ದು, ಪತ್ತೆ ಹಚ್ಚೋ ಕೆಲಸ ಸರ್ಕಾರ ಮಾಡುತ್ತಿದ್ದರೂ ಅವರಿಗೂ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಎಸ್ಐಟಿ ತಂಡ ರಚಿಸಿದೆ. ಅವರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ನಂತ್ರ ಸತ್ಯಾಸತ್ಯದೆ ಹೊರ ಬರಲಿದೆ ಎಂದು ಹೇಳಿದರು.
BREAKING : ಗುಂಡು ಹಾರಿಸಿಕೊಂಡು `ಸಚಿನ್ ತೆಂಡೂಲ್ಕರ್’ ಸೆಕ್ಯುರಿಟಿ ಗಾರ್ಡ್ `ಪ್ರಕಾಶ್ ಕಪಾಡೆ’ ಆತ್ಮಹತ್ಯೆ
H.D ಕುಮಾರಸ್ವಾಮಿ ತಿಮಿಂಗಿಲ ಯಾರೆಂದು ಹೇಳಿದ್ರೆ ಪ್ರಕರಣ ಮುಗೀತು: ಡಾ.ಜಿ.ಪರಮೇಶ್ವರ್