ಬೆಂಗಳೂರು : ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ನಾಳೆ ವಾಪಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜೈಲು ಸೇರಿದ್ದರು. ಇದೀಗ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಹೀಗಾಗಿ ಪ್ರಜ್ವಲ್ ರೇವಣ್ಣ ನಾಳೆಯೇ ಬೆಂಗಳೂರಿಗೆ ಆಗಮಿಸಿ ಕೋರ್ಟ್ ಗೆ ಶರಣಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹರಿಯಾಣದ ಅಕಲ್ ಟ್ರಾವೆಲ್ಸ್ ನಿಂದ ಪ್ರಜ್ವಲ್ ಗೆ ಟಿಕೆಟ್ ಬುಕಿಂಗ್ ಮಾಡಲಾಗಿದೆ. ಬ್ಯುಸಿನೆಸ್ ಕ್ಲಾಸ್ ನಲ್ಲಿ ಅವರ ಟಿಕೆಟ್ ಬುಕ್ ಆಗಿದ್ದು, ಮೇ 16 ರಂದು ಮಧ್ಯರಾತ್ರಿ 12:30 ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಲ್ಯಾಂಡ್ ಆಗುವ ಲುಫ್ತಾನ್ಸಾ ಏರ್ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದಾರೆ ಎನ್ನಲಾಗಿದೆ.