ಹಾಸನ: ಜಿಲ್ಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದಂತ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಅಶ್ಲೀಲ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವಂತ ಪ್ರಜ್ವಲ್ ರೇವಣ್ಣ ಸೋಲು ಕಂಡಿತ್ತು, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ.
ಕಳೆದ 25 ವರ್ಷಗಳಿಂದ ಹಾಸನ ಲೋಕಸಭಾ ಕ್ಷೇತ್ರವು ಜೆಡಿಎಸ್ ತೆಕ್ಕೆಯಾಗಿತ್ತು. ಈ ಕ್ಷೇತ್ರದಲ್ಲಿ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ನಂತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರು ಹೀನಾಯ ಸೋಲು ಕಂಡಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ 25 ವರ್ಷಗಳ ಬಳಿಕ ಹಾಸನ ಸಿಂಹಾಸದ ಕಾಂಗ್ರೆಸ್ ಪಾಲಾಗಿದೆ. ಕೈ ಅಭ್ಯರ್ಥಿ ಶ್ರೇಯಸ್ ಪಟೇಲ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿದಿದೆ.
Election Results 2024: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ 54,658 ಮತಗಳಿಂದ ಮುನ್ನಡೆ