ಬೆಂಗಳೂರು ; ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ ಸಂಬಂದ ಪೆನ್ ಡ್ರೈವ್ ವಿಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ.
ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟವರ ವಿರುದ್ಧ ಕ್ರಮಕ್ಕೆ ಕಾನೂನು ಹೋರಾಟ ಮಾಡಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ವಕೀಲರ ಜೊತೆಗೆ ಚರ್ಚಿಸಿದ್ದು, ಕೋರ್ಟ್ ಗೆ ಕ್ರಮ ವಹಿಸುವಂತೆ ಮನವಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪೆನ್ ಡ್ರೈವ್ ಮೂಲಕ ವಿಡಿಯೋ ಹರಿಬಿಟ್ಟಿದ್ದಕ್ಕೆ ಮಹಿಳೆಯರ ಮಾನಹಾನಿಯಾಗಿದೆ. ಹೀಗಾಗಿ ಇಂತಹ ವಿಡಿಯೋಗಳನ್ನು ಹರಿಬಿಟ್ಟವರ ವಿರುದ್ದ ಕೋರ್ಟ್ ಮೂಲಕ ಕಠಿಣ ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ ಎನ್ನಲಾಗಿದೆ.
ಇನ್ನೂ ರೇವಣ್ಣ ಅವರ ಫೋನ್ ಸೇರಿದಂತೆ ನನ್ನ ಸುತ್ತಮುತ್ತ ಇರುವ ಎಲ್ಲರ ಫೋನ್ ಗಳನ್ನೂ ಸರಕಾರ ಟ್ಯಾಪ್ ಮಾಡಿಸುತ್ತಿದೆ. ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ದೂರಿದ್ದದು, ರಾಜಕೀಯವಾಗಿ ನಮ್ಮ ಕುಟುಂಬವನ್ನು ಮುಗಿಸಲೇಬೇಕು ಎಂದು ಈ ಸರಕಾರ ತೀರ್ಮಾನಕ್ಕೆ ಬಂದಿದೆ. ಅದು ಆಡಿಯೋ ಟೇಪುಗಳಲ್ಲಿಯೇ ಬಯಲಾಗಿದೆ. ಹೀಗಾಗಿ ನಮ್ಮ ಕುಟುಂಬದ ಎಲ್ಲರ ಮೊಬೈಲ್ ಫೋನ್ ಗಳನ್ನು ಸರಕಾರ ಕದ್ದಾಲಿಕೆ ಮಾಡಿಸುತ್ತಿದೆ. ಯಾರನ್ನೂ ಇವರು ಬಿಟ್ಟಿಲ್ಲ, ಎಲ್ಲರ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.