ಬೆಂಗಳೂರು: ಎಸ್ಐಟಿ ವಶದಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರನ್ನು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ನಾಲ್ಕನೇ ಪ್ರಕರಣದಲ್ಲಿ ತಮ್ಮ ವಶಕ್ಕೆ ಪಡೆದಿದ್ದಂತ ಪ್ರಜ್ವಲ್ ರೇವಣ್ಣ ಅವರನ್ನು ಹಾಜರು ಪಡಿಸಿದರು.

ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಜುಲೈ.8ರವಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

ಇದೇ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುವಂತೆ ಅವರ ಪರ ವಕೀಲ ಅರುಣ್ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆ ಮನವಿಯನ್ನು ಜೈಲು ಅಧಿಕಾರಿಗಳಿಗೆ ಸಲ್ಲಿಸುವಂತೆ ಕೋರ್ಟ್ ಸೂಚಿಸಿತು.

ಅಲ್ಲದೇ ಈ ಪ್ರಕರಣವನ್ನು ಸೋಮವಾರ ಮತ್ತೆ ವಿಚಾರಣೆಗೆ ಕೈಗೆತ್ತಿಕೊಳ್ಳುತ್ತೇನೆ. ಜೈಲು ಅಧಿಕಾರಿಗಳು ಮನವಿ ಸ್ವೀಕರಿಸದೇ ಇದ್ದರೇ ತಿಳಿಸುವಂತೆ ಹೇಳಿದೆ.

BREAKING : ಶಾಸಕ ವಿನಯ್‌ ಕುಲಕರ್ಣಿಗೆ ಕೋರ್ಟ್ ಶಾಕ್‌ : ಧಾರವಾಡ ಭೇಟಿಗೆ‌ ಮತ್ತೆ ನಿರಾಕರಣೆ

Share.
Exit mobile version