ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.
ಹಾಸನ ಜಿಲ್ಲೆಯ ಹೊಳನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಂಬಂಧಪಟ್ಟ ವಿಚಾರಣಾ ಮತ್ತು ಜಿಲ್ಲಾ ಸತ್ರ ನ್ಯಾಯಾಲಯಗಳಲ್ಲಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು ವಿಶೇಷ ಸರ್ಕಾರಿ ಅಭಿಯೋಜಕರಾಗಿ ಜಗದೀಶ್ ಅವರನ್ನು ಮುಂದಿನ ಆದೇಶದವರೆಗೆ ನೇಮಿಸಿ ಆದೇಶ ಹೊರಡಿಸಲಾಗಿದೆ.
ಈ ನಡುವೆ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಆದೇಶ ಹೊರಡಿಸಿದ್ದಾರೆ.