ಹಾಸನ : ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಮನೆಗೆ ರಕ್ಷಣೆಗಾಗಿ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿದೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ರಾಸಲೀಲೆ ಪೆನ್ ಡ್ರೈವ್ ಹಂಚಿಕೆ ಮಾಡಿದ್ದಾರೆ ಎನ್ನಲಾದ ಕಾರ್ತಿಕ್ ಅವರ ಮನೆಗೆ ಇಬ್ಬರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆಯಲ್ಲಿರುವ ಕಾರ್ತಿಕ್ ಮನೆಗೆ ಪೊಲೀಸರ ನಿಯೋಜನೆ ಮಾಡಲಾಗಿದೆ. ಪೆನ್ ಡ್ರೈವ್ ರಾಸಲೀಲೆ ಕುರಿತಂತೆ ಕಾರ್ತಿಕ್ ಈ ಹಿಂದೆ ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ್ದರು.