ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಇಂದು ಬಸವನಗುಡಿಯ ಪ್ರಜ್ವಲ್ ರೇವಣ್ಣ ತಂದೆ ಹೆಚ್.ಡಿ. ರೇವಣ್ಣ ಮನೆಯಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.
ಎಸ್ ಐಟಿ ಕಚೇರಿಯಿಂದ ಪ್ರಜ್ವಲ್ ರೇವಣ್ಣ ಅವರನ್ನು ಕರೆದೊಯ್ದ ಎಸ್ ಐಟಿ ಅಧಿಕಾರಿಗಳು ಬಸವನಗುಡಿಯ ರೇವಣ್ಣ ಮನೆಯಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಸಂತ್ರಸ್ತ ಮಹಿಳೆ ನೀಡಿರುವ ಹೇಳಿಕೆ ಆಧಾರಿಸಿ ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಇಂದು ಪ್ರಜ್ವಲ್ ರೇವಣ್ಣನನ್ನ ಎಸ್‍ಐಟಿ ಅಧಿಕಾರಿಗಳು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಪ್ರತಿ ಪ್ರಕರಣದ ತನಿಖೆಯನ್ನ ಪ್ರತ್ಯೇಕವಾಗಿ ನಡೆಸುತ್ತಿರುವ ಎಸ್‍ಐಟಿ ಟೀಂ, ಸದ್ಯ ಈಗ ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದೆ. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಸಂಬಂಧ ಕಳೆದ ಹತ್ತು ದಿನಗಳಿಂದ ಪ್ರಜ್ವಲ್ ವಿಚಾರಣೆ ನಡೆಯುತ್ತಿದೆ.