ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳ ಇಬ್ಬರು ಸರ್ಕಾರಿ ಅಧಿಕಾರಿಗಳು ಸೇರಿದಂತೆ 9 ಸಂತ್ರಸ್ತೆಯರ ವಿಚಾರಣೆ ನಡೆಸಿದೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ವಿಡಿಯೋದಲ್ಲಿರುವ ಸಂತ್ರಸ್ತೆಯರನ್ನು ಗುರುತಿಸಿದೆ. ಈಗಾಗಲೇ 9 ಮಂದಿ ಸಂತ್ರಸ್ತೆಯರನ್ನು ಎಸ್ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದ ವಿಡಿಯೋಗಳಲ್ಲಿರುವ ಸಂತ್ರಸ್ತೆಯನ್ನು ಗುರುತು ಪತ್ತೆ ಹಚ್ಚಿ ಎಸ್ ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ. 9 ಜನ ಸಂತ್ರಸ್ತೆಯರ ವಿಚಾರಣೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸುತ್ತಿದೆ ಎನ್ನಲಾಗಿದೆ.